ಜಿಲ್ಲೆ

ತಳಮಟ್ಟದಲ್ಲಿ ಸಂಘಟಿಸಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿ

ಸರಗೂರು: ಕಾಂಗ್ರೆಸ್ ಯುವ ಕಾರ್ಯಕರ್ತರು ತಳಮಟ್ಟದಲ್ಲಿ ಕೆಲಸ ಮಾಡಿಕೊಂಡು ಬಂದರೆ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಗೆಲುವು ಸಾಧ್ಯ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು .

ಮೈಸೂರಿನ ಜಲದರ್ಶಿನಿ ಪ್ರವಾಸಿ ಮಂದಿರದಲ್ಲಿ ಶನಿವಾರ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಬೇಟಿ ಮಾಡಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಯುವಕರಿಗೆ ಇದೀಗ ರಾಜಕೀಯ ಜೀವನ ಆರಂಭವಾಗಿದ್ದು ಉತ್ತಮ ಜನರ ಪ್ರೀತಿ, ವಿಶ್ವಾಸ ಗಳಿಸಬೇಕು. ಅದರಂತೆ ನೀವು ತಮ್ಮ ತಮ್ಮ ಗ್ರಾಮಗಳಲ್ಲಿ ಕೆಲಸ ಮಾಡಿ ಯುವ ಪೀಳಿಗೆ ಮಾದರಿ ಎಂದು ತೋರಿಸಿಕೊಳ್ಳಬೇಕು ಎಂದರು.

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಪೂರ್ವಾಭ್ಯಾಸವಾಗಿ ಯೂತ್ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಬೂತ್ ಮಟ್ಟದಲ್ಲಿ ಕಾರ್ಯನಿರ್ವಹಿಸಬೇಕು. ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಬಹುದು ಎಂದು ಹೇಳಿದರು.

ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು ಮಾತನಾಡಿ, ದೇಶದ ಸ್ವಾತಂತ್ರೃ ಹೋರಾಟದಲ್ಲಿ ಬಲಿದಾನ ಮಾಡಿರುವ ಚರಿತ್ರೆ ಕಾಂಗ್ರೆಸ್ ಪಕ್ಷಕ್ಕೆ ಇದೆ. ಬಿಜೆಪಿ, ಜೆಡಿಎಸ್ ಪಕ್ಷ ಯಾವುದೇ ಸ್ಥಳೀಯ ಚುನಾವಣೆಯಲ್ಲಿ ಗೆಲವು ಸಾಧಿಸಲು ಬಿಡಬಾರದು. ಸರಗೂರು ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತವೆ ಎಂದು ಭರವಸೆ ನೀಡಿದರು.

ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯುವ ಪ್ರಯತ್ನವನ್ನು ಬಿಜೆಪಿ ಪಕ್ಷ ಮಾಡುತ್ತಿದೆ. ಇಲ್ಲಿ ಜಾತಿಮತಕ್ಕಿಂತ ಹೆಚ್ಚಾಗಿ ನಾವೆಲ್ಲರೂ ಭಾರತೀಯರು, ಕನ್ನಡಿಗರು ಎಂಬ ಭಾವನೆ ಮೂಡಬೇಕು. ಇಲ್ಲಿ ಯಾರಿಗೆ ಅನ್ಯಾಯವಾದರೂ ಅದು ಭಾರತೀಯರಿಗೆ ಅನ್ಯಾಯವಾದಂತೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಭಾಗ್ಯಲಕ್ಷ್ಮೀ ನಿಂಗರಾಜು, ಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಜರುದ್ದೀನ್, ಜಿಲ್ಲಾ ಕಾರ್ಯದರ್ಶಿ ಕಳಸೂರು ಬಸವರಾಜು, ವನಸಿರಿ ಉಮೇಶ್, ಚಿನ್ನಯ್ಯ, ಹಾಲಯ್ಯ ಇತರರು ಇದ್ದರು.