ಜಿಲ್ಲೆ

ಮೈಸೆಮ್‌ನಲ್ಲಿ ಓರಿಯಂಟೇಷನ್ ಡೇ

reportermys


ಮೈಸೂರು: ಉದ್ಯೋಗಕ್ಕಿಂತ ಜ್ಞಾನ ಪಡೆಯುವುದು ಮುಖ್ಯ ಎಂದು ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ತಿಳಿಸಿದರು.
ಮೈಸೂರು ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ (ಮೈಸೆಮ್)ನಲ್ಲಿ ಶನಿವಾರ ಆಯೋಜಿಸಿದ್ದ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳ ಓರಿಯಂಟೇಷನ್ ಡೇ ಕಾರ್ಯಕ್ರಮದಲ್ಲಿ ಮಾತನಾಡಿದರು.


ಭಾರತದಲ್ಲಿ ಯುವಕರ ಪಾತ್ರಗಳು ಮತ್ತು ಜವಾಬ್ದಾರಿಗಳು, ವಿಶೇಷವಾಗಿ ಇಂಜಿನಿಯರಿಂಗ್ ಶಿಕ್ಷಣದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.
ಕಾಲೇಜಿನ ಅಧ್ಯಕ್ಷ ಶಿವಪ್ಪ, ಕಾರ್ಯದರ್ಶಿ ಪ್ರೊ.ಎಂ.ಮಂಜುನಾಥ್, ಖಜಾಂಚಿ ಪೂರ್ಣಿಮಾ ಕಿರಣ್, ಟ್ರಸ್ಟಿ ಕೆ.ಎನ್.ಪುಟ್ಟಬುದ್ಧಿ, ಪ್ರಾಂಶುಪಾಲ ಡಾ.ಎಂ.ಎಸ್.ಪ್ರಭುಸ್ವಾಮಿ ಇತರರಿದ್ದರು. ಪ್ರಥಮ ವರ್ಷದ ವಿದ್ಯಾರ್ಥಿಗಳು, ಪಾಲಕರು, ಬೋಧಕ ಹಾಗೂ ಬೋಧಕೇತರ ವರ್ಗದವರು ಭಾಗವಹಿಸಿದ್ದರು.