ಲೋಕಾಪುರ ಪಟ್ಟಣದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ನೆರವೇರಿಸಿದರು. ಉದಯಸಿಂಗ್ ಪಡತಾರೆ, ಶಿವಾನಂದ ಉದಪುಡಿ, ಗುರುರಾಜ ಉದಪುಡಿ ಇದ್ದರು. 
ಜಿಲ್ಲೆ

ಬಡವರಿಗೆ ನಮ್ಮ ಕ್ಲಿನಿಕ್ ಸಹಕಾರಿ

ದತ್ತಾತ್ರೇಯ ಪಿ ಕುಲಕರ್ಣಿ

ಲೋಕಾಪುರ: ನಮ್ಮ ಕ್ಲಿನಿಕ್ ಅನ್ನು ಸರ್ಕಾರವು ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಸುಲಭವಾಗಿ ಆರೋಗ್ಯ ಸೇವೆ ಒದಗಿಸಲು ಸ್ಥಾಪಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಪಟ್ಟಣದಲ್ಲಿ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ 15ನೇ ಹಣಕಾಸು ಯೋಜನೆ ಅಡಿಯಲ್ಲಿ  ಆರಂಭಿಸಿದ ನಮ್ಮ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿದ ಅವರು, ನಗರ ಪ್ರದೇಶಗಳ ಬಡವರು ಹಾಗೂ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ನಮ್ಮ ಕ್ಲಿನಿಕ್‌ಗಳ ಮುಖಾಂತರ ಒದಗಿಸಬಹುದು. ಈ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್‌ಗಳಿಗೆ ಹೊಸ ಕಾಯಕಲ್ಪ ನೀಡಲು ಯೋಜನೆ ರೂಪಿಸಲಾಗುತ್ತಿದೆ. ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳ 12 ಪ್ಯಾಕೇಜ್‌ಗಳ ನಿರ್ವಹಣೆ ಮಾಡಲಾಗುತ್ತಿದೆ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುನಾಥ ಎನ್. ಮಾತನಾಡಿ, ನಮ್ಮ ಕ್ಲಿನಿಕ್‌ಗಳು ಸಾಮಾನ್ಯವಾಗಿ ಬೆಳಗ್ಗೆ 9 ರಿಂದ ಮಧ್ಯಾಹ್ನ 12.30 ರ ವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 4:30 ರ ವರೆಗೆ ಕಾರ್ಯನಿರ್ವಹಿಸುತ್ತವೆ. ಆದರೆ, ಕಾರ್ಮಿಕ ವರ್ಗದವರಿಗೆ ಅನುಕೂವಾಗುವಂತೆ ಕೆಲವು ಕ್ಲಿನಿಕ್‌ಗಳನ್ನು ರಾತ್ರಿ 8 ರ ವರೆಗೆ ತೆರೆದಿಸಲು ಸಿದ್ಧತೆ ನಡೆದಿದೆ ಎಂದರು.

ಉದಯಸಿಂಗ ಪಡತರೆ, ಶಿವಾನಂದ ಉದಪುಡಿ, ಗುರುರಾಜ ಉದಪುಡಿ, ರಫೀಕ ಭೈರಕದಾರ, ಸುಭಾಸ ಗಸ್ತಿ, ಗೋವಿಂದ ಕೌಲಗಿ, ಭೀಮನಗೌಡ ಪಾಟೀಲ, ಲಕ್ಷ್ಮ್ಮಣ ಮಾಲಗಿ, ಸುಲ್ತಾನ ಕಲಾದಗಿ, ಬೀರಪ್ಪ ಮಾಯಣ್ಣವರ, ಗೋಪಾಲ ಲಮಾಣಿ, ಯಾಜ ವನಿಯಾರ, ಶಿವಯೋಗಿ ಗಂಗಣ್ಣವರ, ತಾಲೂಕಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ ಮಲಘಾಣ, ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ. ಶಿವನಗೌಡ ಪಾಟೀಲ, ಡಾ. ಕುಸುಮಾ ಮಾಗಿ, ಡಾ.ಸುನೀಲ ಬೆನೂರ ಇದ್ದರು.