ನಾಗಮಂಗಲ: ಸರ್ಕಾರಿ ಶಾಲೆಯ ಬೆಳವಣಿಗೆ ಹಾಗೂ ಅಭಿವೃದ್ಧಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೇಶ್ ಮನವಿ ಮಾಡಿದರು.
ತಾಲೂಕಿನ ದೇವಲಾಪುರ ಹೋಬಳಿಯ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ನಮ್ಮೂರ ಶಾಲೆ ನಮ್ಮ ಜವಾಬ್ದಾರಿ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಶಿಕ್ಷಣಕ್ಕೆಂದು ಹೊಸ ಯೋಜನೆಗಳನ್ನು ರೂಪಿಸುತ್ತಿದೆ. ಶಿಕ್ಷಣ ಇಲಾಖೆಯಿಂದ ನೀಡುವ ಸೌಲಭ್ಯವನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಹರೀಶ್‌ಗೌಡ ವಹಿಸಿದ್ದರು. ಬಿಆರ್‌ಸಿ ರವೀಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಂಜಣ್ಣ, ನರೇಗಾ ಯೋಜನೆಯ ಮೇನಕಾ, ಮುಖ್ಯ ಶಿಕ್ಷಕ ಬೋರಯ್ಯ ಇತರರಿದ್ದರು.