ಮಡಿಕೇರಿ:
ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಒಂದು ಸೋಮವಾರ ಬಳಗ್ಗೆ ಮಡಿಕೇರಿ ಸಮೀಪದ ಜೋಡುಪಾಲ ಬಳಿ ರಸ್ತೆಗೆ ಅಡ್ಡಲಾಗಿ ಮಗುಚಿ ಬಿದ್ದಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಬಸ್ ಡ್ರೈವರ್‌ಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ ಈ ಮಾರ್ಗದಲ್ಲಿ ಬೆಳಗ್ಗೆ ಸುಮಾರು ೨ ಗಂಟೆಗಳ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಥಳೀಯರು ಕಾರ್ಯಾಚರಣೆ ನಡೆಸಿ ಬಸ್ ಬದಿಗೆ ಸರಿಸಿದ ನಂತರ ವಾಹನ ಸಂಚಾರ ಮಾಮೂಲಿ ಸ್ಥಿತಿಗೆ ಬಂತು. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.