ಹುಬ್ಬಳ್ಳಿ : ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ ಅವರು ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಭಾರತೀಯ ರೈಲ್ವೆ ಮೆಕಾನಿಕಲ್ ಇಂಜಿನಿಯರ್ಗಳ ಸೇವೆಯ (ಐಆರ್ಎಸ್ಎಂಇ) 1989ರ ಬ್ಯಾಚ್ನ ಅಧಿಕಾರಿಯಾಗಿರುವ ಅನಂತ ಅವರು, ಮೆಕಾನಿಕಲ್ ಇಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದಾರೆ. ಭಾರತೀಯ ರೈಲ್ವೆಯಲ್ಲಿ ಮೂರು ದಶಕಗಳಿಗೂ ಹೆಚ್ಚುಕಾಲ ವಿವಿಧ ಹುದ್ದೆಗಳಲ್ಲಿ ಅನುಭವ ಹೊಂದಿದ್ದಾರೆ.
ಅವರು ಆಗ್ನೇಯ ರೈಲ್ವೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದು, 2002 ರಿಂದ 2008 ರವರೆಗೆ ರೈಲ್ವೆ ಮಂಡಳಿಯಲ್ಲಿ ನಿರ್ದೇಶಕ (ಮಾನವಶಕ್ತಿ ಯೋಜನೆ) ಹುದ್ದೆ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ. 2012 ರಿಂದ 2017 ರವರೆಗೆ ಬನಾರಸ್ ಲೋಕೋಮೋಟಿವ್ ವರ್ಕ್ಸ್ನಲ್ಲಿ ಮುಖ್ಯ ಮೆಕ್ಯಾನಿಕಲ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿ, ಉತ್ಪಾದನೆ ಮತ್ತು ಆಧುನೀಕರಣ ಚಟುವಟಿಕೆಗಳಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.
2017 ರಿಂದ ದೆಹಲಿಯ ರೈಲ್ವೆ ಮಾಹಿತಿ ವ್ಯವಸ್ಥೆಗಳ ಕೇಂದ್ರದಲ್ಲಿ ಕೋಚ್ ನಿರ್ವಹಣಾ ವ್ಯವಸ್ಥೆಯ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ ಅವರು, 2021ರ ಆಗಷ್ಟ್ನಿಂದ 2023ರ ಅಕ್ಟೋಬರ್ವರೆಗೆ ದಕ್ಷಿಣ ರೈಲ್ವೆಯ ಮಧುರೈ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.