ಜಿಲ್ಲೆ

ವಿದ್ಯಾರ್ಥಿಗಳಲ್ಲಿ ಐಎಎಸ್ ಹುದ್ದೆಯ ಆಸಕ್ತಿ ಬೆಳೆಸಿದ ಮಣಿವಣ್ಣನ್

ಧಾರವಾಡ: ವಿದ್ಯಾರ್ಥಿಗಳು ಐಎಎಸ್ ಹುದ್ದೆಯ ಮಹತ್ವ, ಅದರ ವಿಭಾಗಗಳು, ಆಡಳಿತ ಸೇವೆಗಳ ಬಗ್ಗೆ ತಿಳಿವಳಿಕೆ ಹೊಂದಬೇಕು. ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಹೇಳಿದರು.
ತಾಲೂಕಿನ ಹೆಬ್ಬಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜಿಗೆ ಇತ್ತೀಚೆಗೆ ದಿಢೀರ್ ಭೇಟಿ ನೀಡಿದ್ದ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು.
ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಹಾಸ್ಟೆಲ್‌ಗೆ ಭೇಟಿ ನೀಡಿದ್ದ ಅವರು, ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು. ಕಾಲೇಜಿನ ಆವರಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕೆಲ ಸೂಚನೆಗಳನ್ನು ನೀಡಿದರು.