ಹನುಮಸಾಗರ ಸಮೀಪದ ಹಾಬಲಕಟ್ಟಿ ಗ್ರಾಮದಲ್ಲಿ ಶನಿವಾರ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಕರೊನಾ ಬಗ್ಗೆ ಜಾಗೃತಿ ಮೂಡಿಸಿದರು.  
ಜಿಲ್ಲೆ

ಕಟ್ಟೆ ಮೇಲೆ ಕುಳಿತು ಹರಟೆ ಹೊಡೆಯುವುದು ನಿಲ್ಲಿಸಿ- ಶಾಸಕ ಅಮರೇಗೌಡ ಬಯ್ಯಪುರ ಸಲಹೆ

Koppal

ಹನುಮಸಾಗರ: ಗ್ರಾಪಂ ಅಧಿಕಾರಿಗಳು ಮತ್ತು ಸದಸ್ಯರು ಗ್ರಾಮಸ್ಥರಿಗೆ ಕರೊನಾ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹೇಳಿದರು.

ಸಮೀಪದ ಹಾಬಲಕಟ್ಟಿ ಗ್ರಾಮದಲ್ಲಿ ಶನಿವಾರ ಗ್ರಾಪಂ ಅಧಿಕಾರಿಗಳು, ಸದಸ್ಯರು ಹಾಗೂ ಗ್ರಾಮದ ಮುಖಂಡರೊಂದಿಗೆ ಚರ್ಚಿಸಿ ಮಾತನಾಡಿದರು. ಕರೊನಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅವಶ್ಯಕ. ಜನರು ಅನಗತ್ಯವಾಗಿ ಹೊರಗೆ ತಿರುಗಾಡುವುದನ್ನು ನಿಲ್ಲಿಸಬೇಕು. ಗ್ರಾಮದ ಕಟ್ಟೆ ಹಾಗೂ ಮರಗಳ ಕೆಳಗೆ ಕುಳಿತು ಹರಟೆ ಹೊಡೆಯದೆ ಮನೆಯಲ್ಲೇ ಇರಬೇಕು. ಅವಶ್ಯವಿದ್ದರೆ ಮಾತ್ರ ಮಾಸ್ಕ್ ಹಾಕಿಕೊಂಡು ಹೊರಗೆ ಬರಬೇಕು ಎಂದರು.

ಪಿಡಿಒ ದೇವೇಂದ್ರಪ್ಪ ಕಮತರ, ಮುಖಂಡ ಸೋಮಶೇಖರ ವೈಜಾಪುರ, ಗ್ರಾಪಂ ಸದಸ್ಯರು, ಸಿಬ್ಬಂದಿ ಮತ್ತು ಗ್ರಾಮದ ಮುಖಂಡರು ಇದ್ದರು.