ಸುಳ್ಯ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ವಿರೋಧಿಸಿ ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.
ಪಾದಯಾತ್ರೆ ನಡೆಸಿ ಬಳಿಕ ಬಸ್ ನಿಲ್ದಾಣದ ಬಳಿಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ಪದ್ಮರಾಜ್ ಪೂಜಾರಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಟಿ.ಎಂ.ಶಹೀದ್ ತೆಕ್ಕಿಲ್, ಎಂ.ಎಸ್.ಮಹಮ್ಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕಾಂಗ್ರೆಸ್ ಮುಖಂಡರಾದ ಶಹೀದ್ ಪಾರೆ, ಎ.ಬಿ.ಇಬ್ರಾಹಿಂ ಕಲ್ಲುಗುಂಡಿ, ಅನಿಲ್ ರೈ, ಸಲೀಂ ಪೆರುಂಗೋಡಿ, ಅಬ್ದುಲ್ ಮಜೀದ್ ನಡುವಡ್ಕ, ಕಳಂಜ ವಿಶ್ವನಾಥ ರೈ, ಪ್ರವೀಣ ಮರುವಂಜ, ಸೋಮಶೇಖರ ಕೇವಳ, ಧೀರಾ ಕ್ರಾಸ್ತಾ, ಅಬ್ದುಲ್ ಗಫೂರ್ ಕಲ್ಮಡ್ಕ, ಹರೀಶ್ ಇಂಜಾಡಿ, ಹಸೈನಾರ್ ಹಾಜಿ ಗೋರಡ್ಕ, ಮಿತ್ರದೇವ ಮಡಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.