ಮದ್ದಳೆಗಾರ ಪದ್ಯಾಣ ಶಂಕರನಾರಾಯಣ ಭಟ್ಟರಿಗೆ ಮಂಡೆಚ್ಚ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಟೀಲು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ, ಕಟೀಲು ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿಪ್ರಸಾದ ಆಸ್ರಣ್ಣ, ಕಲ್ಲಾಡಿ ದೇವೀಪ್ರಸಾದ ಶೆಟ್ಟಿ, ದೊಡ್ಡಯ್ಯ ಮೂಲ್ಯ ಮತ್ತಿತರರಿದ್ದರು. 
ಜಿಲ್ಲೆ

ಮಂಡೆಚ್ಚ ಪ್ರಶಸ್ತಿ ಸ್ವೀಕರಿಸಿದ ಪದ್ಯಾಣ ಶಂಕರನಾರಾಯಣ ಭಟ್ಟ

Prashanth S Suvarna

ಕಟೀಲು: ಹಿರಿಯ ಭಾಗವತರ ಹೆಸರಿನಲ್ಲಿ ಕೊಡಮಾಡುವ ಪ್ರಶಸ್ತಿ ಗೌರವಯುತ ಹಾಗೂ ಅಭಿನಂದನಾರ್ಹ ಎಂದು ಕಟೀಲು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಹೇಳಿದರು.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸರಸ್ವತಿ ಸದನದಲ್ಲಿ ಭಾನುವಾರ ಭಾಗವತ ದಾಮೋದರ ಮಂಡೆಚ್ಚರ ಹೆಸರಿನಲ್ಲಿ ಕೊಡಮಾಡುವ ಮಂಡೆಚ್ಚ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಮದ್ದಳೆಗಾರ ಪದ್ಯಾಣ ಶಂಕರನಾರಾಯಣ ಭಟ್ಟರಿಗೆ ಮಂಡೆಚ್ಚ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀಹರಿನಾರಾಯಣದಾಸ ಆಸ್ರಣ್ಣ, ಮಂಡೆಚ್ಚರ ಹಾಗೂ ಕುಬಣೂರು ಶ್ರೀಧರ ರಾಯರ ಸಂಸ್ಮರಣೆ ಮಾಡಿದರು. ಕಟೀಲು ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿಪ್ರಸಾದ ಆಸ್ರಣ್ಣ, ಕಲ್ಲಾಡಿ ದೇವೀಪ್ರಸಾದ ಶೆಟ್ಟಿ, ದೊಡ್ಡಯ್ಯ ಮೂಲ್ಯ ಮತ್ತಿತರರಿದ್ದರು. ಡಾ.ಶ್ರುತಕೀರ್ತಿರಾಜ ಕಾರ್ಯಕ್ರಮ ನಿರೂಪಿಸಿದರು.ಮದ್ದಳೆಗಾರ ಪದ್ಯಾಣ ಶಂಕರನಾರಾಯಣ ಭಟ್ಟರಿಗೆ ಮಂಡೆಚ್ಚ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಟೀಲು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ, ಕಟೀಲು ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿಪ್ರಸಾದ ಆಸ್ರಣ್ಣ, ಕಲ್ಲಾಡಿ ದೇವೀಪ್ರಸಾದ ಶೆಟ್ಟಿ, ದೊಡ್ಡಯ್ಯ ಮೂಲ್ಯ ಮತ್ತಿತರರಿದ್ದರು.