ಜಿಲ್ಲೆ

ತೋಳನಕೆರೆಯಲ್ಲಿ ಚಿತ್ರಕಲೆ ಸ್ಪರ್ಧೆ ಅ. 6ಕ್ಕೆ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಕನ್ನಡದ ನಂ. 1 ದಿನಪತ್ರಿಕೆ ‘ವಿಜಯವಾಣಿ’, ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಹಾಗೂ ಟ್ರಿನಿಟಿ ಟೆಕ್ನಾಲಜಿ ಆಂಡ್ ಸಾಫ್ಟ್​ವೇರ್ ಸೊಲ್ಯೂಷನ್ಸ್ ಪ್ರವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಅ. 6ರಂದು ಬೆಳಗ್ಗೆ 11 ಗಂಟೆಗೆ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದೆ.

‘ಬೈಸಿಕಲ್ ಬಳಸಿ ಇಂಗಾಲದ ಹೆಜ್ಜೆ ಗುರುತುಗಳನ್ನು ಕಡಿಮೆ ಮಾಡುವುದು’ ವಿಷಯ ಕುರಿತು ಇಲ್ಲಿನ ರೇಣುಕಾ ನಗರದ ತೋಳನಕೆರೆ ಉದ್ಯಾನದಲ್ಲಿ ಚಿತ್ರಕಲೆ ಸ್ಪರ್ಧೆ ಏರ್ಪಡಿಸಲಾಗಿದೆ. ಇದಕ್ಕೆ ಸವಾರಿ ಹಬ್ಬ ಎನ್ನುವ ಶಿರೋನಾಮೆ ನೀಡಲಾಗಿದೆ. 5 ರಿಂದ 7ನೇ ತರಗತಿ ಹಾಗೂ 8 ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಬಹುದು. ಹೆಸರು ನೋಂದಾಯಿಸಿದ ಮೊದಲ 500 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು.

ಮೊಬೈಲ್ ಸಂಖ್ಯೆ 6364052079 ಗೆ ಕರೆ ಮಾಡಿ, ಹೆಸರು ನೋಂದಾಯಿಸಬಹುದು ಅಥವಾ ಅಂದು ಬೆಳಗ್ಗೆ 10 ಗಂಟೆಗೆ ಸ್ಪರ್ಧೆ ನಡೆಯುವ ಸ್ಥಳದಲ್ಲಿಯೇ ಹೆಸರು ನೋಂದಾಯಿಸಬಹುದು. ಭಾಗವಹಿಸುವ ವಿದ್ಯಾರ್ಥಿಗಳು ತಮ್ಮ ಶಾಲೆಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ವಿಜೇತರಿಗೆ ಪ್ರಮಾಣ ಪತ್ರ, ಫಲಕ ಮತ್ತು ನಗದು ಬಹುಮಾನ ನೀಡಲಾಗುವುದು.