ಜಿಲ್ಲೆ

ಆ.15ರಂದು ನಗರದಲ್ಲಿ ಚಿತ್ರಕಲೆ, ವೇಷಭೂಷಣ ಸ್ಪರ್ಧೆ: ಕಲಾತಪಸ್ವಿ ಟ್ರಸ್ಟ್‌ನಿಂದ ಆಯೋಜನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಗಾಂಧಿಭವನದಲ್ಲಿ ಆ.15ರಂದು ಮಧ್ಯಾಹ್ನ 2ಕ್ಕೆ ಕಲಾತಪಸ್ವಿ ಟ್ರಸ್ಟ್, ಮಹಾತ್ಮಗಾಂಧಿ ಸ್ಮಾರಕ ಟ್ರಸ್ಟ್, ಡಾ.ಈ.ಸಿ.ನಿಂಗರಾಜ್‌ಗೌಡ ಫೌಂಡೇಷನ್, ಎಂವಿಜಿ ಬೇಕರಿ ಸ್ವೀಟ್ಸ್ ಸಹಯೋಗದಲ್ಲಿ ಚಿತ್ರಕಲೆ ಹಾಗೂ ದೇಶ ಭಕ್ತರ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜ್‌ಗೌಡ ಉದ್ಘಾಟಿಸಲಿದ್ದು, ನಂಜಮ್ಮ ಮೋಟೇಗೌಡ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಕೆ.ಟಿ.ಹನುಮಂತು ಅಧ್ಯಕ್ಷತೆ ವಹಿಸಲಿದ್ದಾರೆ. ಬಜರಂಗಸೇನೆ ರಾಜ್ಯಾಧ್ಯಕ್ಷ ಬಿ.ಮಂಜುನಾಥ್ ಬಹುಮಾನ ವಿತರಿಸಲಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಮೊ.ಸಂ 8497075299 ಯನ್ನು ಸಂಪರ್ಕಿಸಬಹುದೆಂದು ಕಲಾತಪಸ್ವಿ ಟ್ರಸ್ಟ್ ಕಾರ್ಯದರ್ಶಿ ಎಸ್.ಬಿ.ಅನಿಲ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.