ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಪಲಿಮಾರು ಶಾಖೆಯ ನೂತನ ಕಟ್ಟಡ ಸಹಕಾರ ಸಂಕೀರ್ಣ ಮತ್ತು ನವೀಕೃತ ಹವಾನಿಯಂತ್ರಿತ ಶಾಖೆಯನ್ನು ಎಂ.ಎನ್. ರಾಜೇಂದ್ರಕುಮಾರ್ ಉದ್ಘಾಟಿಸಿದರು 
ಜಿಲ್ಲೆ

ಸಹಕಾರಿ ಬ್ಯಾಂಕ್‌ಗಳತ್ತ ಗ್ರಾಹಕರ ಒಲವು

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಸಂಕುಚಿತಗೊಳ್ಳುತ್ತಿರುವ ವಾಣಿಜ್ಯ ಬ್ಯಾಂಕ್‌ಗಳಿಂದ ಜನ ದೂರವಾಗುತ್ತಿದ್ದು, ವಿಕಸಿತಗೊಳ್ಳುತ್ತಿರುವ ಸಹಕಾರಿ ಬ್ಯಾಂಕ್‌ಗಳ ಉತ್ತಮ ಸೇವೆಯಿಂದ ಜನರಿಗೆ ಹತ್ತಿರವಾಗುತ್ತಿವೆ. ಜನರ ಒಲವೂ ಸಹಕಾರಿ ಬ್ಯಾಂಕ್‌ಗಳತ್ತ ಹೆಚ್ಚಾಗುತ್ತಿವೆ ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್ ಹೇಳಿದರು.

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಪಲಿಮಾರು ಶಾಖೆಯ ನೂತನ ಕಟ್ಟಡ ಸಹಕಾರ ಸಂಕೀರ್ಣ ಮತ್ತು ನವೀಕೃತ ಹವಾನಿಯಂತ್ರಿತ ಶಾಖೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

130 ಕೋಟಿ ರೂ.ಗೂ ಹೆಚ್ಚು ಠೇವಣಿ ಸಂಗ್ರಹಿಸಿ 5 ಶಾಖೆಗಳ ಮೂಲಕ ಸಾಲ ಸೌಲಭ್ಯ ನೀಡುವುದರೊಂದಿಗೆ 16 ವರ್ಷಗಳಿಂದ ಶೇ.25 ಡಿವಿಡೆಂಡ್ ಕೊಡುತ್ತ ಬಂದಿದೆ. ಪಲಿಮಾರು ಶಾಖೆಗೆ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಘೋಷಿಸಿದರು.
ಪಲಿಮಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಧಾನ ಅರ್ಚಕ ಶ್ರೀನಿವಾಸ ಉಡುಪ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಡಿ.ಸುವರ್ಣ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿದರು. ಠೇವಣಿದಾರರಿಗೆ ನಿರಖು ಠೇವಣಿ ಪತ್ರ ವಿತರಿಸಲಾಯಿತು.

ಸಹಕಾರ ಸಂಘಗಳ ಕುಂದಾಪುರ ಉಪವಿಭಾಗ ಸಹಾಯಕ ನಿಬಂಧಕಿ ಸುಕನ್ಯಾ, ಎಸ್‌ಡಿಸಿಸಿ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಪಲಿಮಾರು ಗ್ರಾಪಂ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷ ರಾಯೇಶ್ವರ ಪೈ, ತಾಪಂ ಮಾಜಿ ಸದಸ್ಯರಾದ ಲಕ್ಷ್ಮಣ ಶೆಟ್ಟಿ, ದಿನೇಶ್ ಕೊಟ್ಯಾನ್, ಡಾ.ಪ್ರಭಾ ನಂಬಿಯಾರ್, ಎಂ.ಪಿ ಶೇಖಬ್ಬ, ಉದ್ಯಮಿ ದಿನೇಶ್ ಪ್ರಭು ಪಲಿಮಾರು, ನಿರ್ದೇಶಕರಾದ ರಸೂಲ್ ವೈ. ಜಿ., ಗಿರೀಶ್ ಪಲಿಮಾರು, ಶಿವರಾಮ ಎನ್ ಶೆಟ್ಟಿ, ರಾಜಾರಾಂ ರಾವ್, ವಾಸುದೇವ ದೇವಾಡಿಗ, ಯಶವಂತ ಪಿ.ಬಿ, ಮಾಧವ ಆಚಾರ್ಯ, ಸ್ಟ್ಯಾನಿ ಕ್ವಾಡ್ರಸ್, ಸುಚರಿತ ಎಲ್ ಅಮೀನ್, ಕುಸುಮಾ ಎಂ.ಕರ್ಕೇರ, ಕಾಂಚನ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಶ್ಮಿತಾ ಪಿ.ಎಚ್, ಶಾಖಾ ವ್ಯವಸ್ಥಾಪಕಿ ಶೋಭಾ ಎಚ್ ಪುತ್ರನ್, ಎಸ್‌ಸಿಡಿಸಿಸಿ ಬ್ಯಾಂಕ್ ಪ್ರತಿನಿಧಿ ಬಾಲಗೋಪಾಲ ಬಲ್ಲಾಳ್ ಕೆ. ಉಪಸ್ಥಿತರಿದ್ದರು. ಸೊಸೈಟಿ ಅಧ್ಯಕ್ಷ ವೈ. ಸುಧೀರ್ ಕುಮಾರ್ ಸ್ವಾಗತಿಸಿದರು. ಉಪಾಧ್ಯಕ್ಷ ಗುರುರಾಜ ಪೂಜಾರಿ ವಂದಿಸಿದರು. ಉಪನ್ಯಾಸಕ ದೇವಿಪ್ರಸಾದ್ ಬೆಳ್ಳಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನ, ಗೌರವಾರ್ಪಣೆ

ಎಂ.ಎನ್.ರಾಜೇಂದ್ರ ಕುಮಾರ್, ಭಾರತ ಕಬ್ಬಡಿ ತಂಡದ ಮಾಜಿ ನಾಯಕ ಶೇಖರ ಶೆಟ್ಟಿ, ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ, ಯುವ ಕೃಷಿಕ ರೋಹಿತ್ ಶೆಟ್ಟಿ, ಸಮಾಜಸೇವೆಕ ಶರಣ್ ಮಟ್ಟು ಅವರನ್ನು ಅಭಿನಂದಿಸಲಾಯಿತು. ಗುತ್ತಿಗೆದಾರರು, ಇಂಜಿನಿಯರ್, ಸಾಧಕ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ಗೌರವಿಸಲಾಯಿತು.

ಪಡುಬಿದ್ರಿ ಸೊಸೈಟಿ ಮೂಲಕ ಕೃಷಿಕರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ನಮ್ಮೊಂದಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಕೈಜೋಡಿಸಬೇಕು. ಮಾರ್ಚ್ ಒಳಗೆ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ 50 ಕೋಟಿ ರೂ. ಠೇವಣಿ ಇಟ್ಟು ಬ್ಯಾಂಕ್ ಘೋಷಿಸಿದ 3 ಪವನ್ ಬಂಗಾರ ಪಡೆಯುವ ಗುರಿಯನ್ನು ಸೊಸೈಟಿ ಹೊಂದಿದೆ.-ವೈ.ಸುಧೀರ್‌ಕುಮಾರ್, ಅಧ್ಯಕ್ಷ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ