ಜಿಲ್ಲೆ

ಅಕ್ಷತಾಗೆ ಪಂಪ ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ

ಸುಳ್ಯ: ಕರ್ನಾಟಕ ಸಾಹಿತ್ಯ ಸಂಭ್ರಮ ವೇದಿಕೆ ರಾಜ್ಯ ಘಟಕ ಮೂಡಿಗೆರೆ ಚಿಕ್ಕಮಗಳೂರು ಜಿಲ್ಲೆ ವತಿಯಿಂದ ಸಾಹಿತ್ಯ ಸಂಭ್ರಮ-100ರ ಪ್ರಯುಕ್ತ ನಡೆದ ರಾಜ್ಯಮಟ್ಟದ ಕವಿ ಕಾವ್ಯ ಸಮ್ಮೇಳನದ ಕವಿಗೋಷ್ಠಿಯಲ್ಲಿ ಪೆರುವಾಜೆ ಗ್ರಾಮ ಪಂಚಾಯಿತಿಯ ಅಕ್ಷತಾ ನಾಗನಕಜೆಯವರನ್ನು ಪಂಪ ಸಾಹಿತ್ಯ ಸಿರಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಚಿಕ್ಕಮಗಳೂರಿನ ಸಾಹಿತಿ ರಂಗಭೂಮಿ ಕಲಾವಿದರಾಗಿರುವ ಎಚ್.ಎಂ. ನಾಗರಾಜ್ ರಾವ್ ಅಧ್ಯಕ್ಷತೆಯಲ್ಲಿ ಮೂಡಿಗೆರೆ ಪಂಚಾಯಿತಿ ದೀನ್ ದಯಾಳ್ ಸಭಾಂಗಣದಲ್ಲಿ ನ.24ರಂದು ನಡೆದ ಕವಿಗೋಷ್ಠಿಯಲ್ಲಿ ಅವರು ಭಾಗವಹಿಸಿದ್ದರು.