ಜಿಲ್ಲೆ

ಪಂಚಾಯಿತಿವಾರು ಗ್ಯಾರಂಟಿ ಯೋಜನೆಯ ಸಭೆ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಗ್ಯಾರಂಟಿ ಯೋಜನೆಯ ಅನುಕೂಲತೆಗಳನ್ನು ಸಾರ್ವಜನಿಕರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸಲು ಪ್ರತಿ ಗ್ರಾಮ ಪಂಚಾಯಿತಿವಾರು ಗ್ಯಾರಂಟಿ ಯೋಜನೆಯ ಸಭೆ ಆಯೋಜಿಸಲಾಗುವುದು ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಅರವಿಂದ ಏಗನಗೌಡರ ಹೇಳಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲೂಕು ಗ್ಯಾರಂಟಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ಅನುಕೂಲಕರವಾಗಿವೆ. ತಾಂತ್ರಿಕ ಸಮಸ್ಯೆಗಳಿದ್ದರೆ ತಕ್ಷಣ ಪರಿಹರಿಸಿ ಫಲಾನುಭವಿಗಳಿಗೆ ಯೋಜನೆಯ ಪ್ರಯೋಜನ ಸಿಗುವಂತೆ ಮಾಡಬೇಕು ಎಂದರು.

ತಹಸೀಲ್ದಾರ್ ಡಿ.ಎಚ್. ಹೂಗಾರ, ತಾ.ಪಂ. ಕಾರ್ಯನಿರ್ವಾಹಕ ಅಽಕಾರಿ ಗಂಗಾಧರ ಕಂದಕೂರ ವೇದಿಕೆಯಲ್ಲಿದ್ದರು.

ಸಾರಿಗೆ ಸಂಸ್ಥೆಯ ಧಾರವಾಡ ಘಟಕ ವ್ಯವಸ್ಥಾಪಕ, ಶಿಶು ಅಭಿವೃದ್ಧಿ ಯೋಜನಾಽಕಾರಿ, ಆಹಾರ ವಿಭಾಗದ ತಹಸೀಲ್ದಾರ್, ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಉದ್ಯೋಗ ವಿನಿಮಯ ಕೇಂದ್ರದ ಅಽಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಽಕಾರಿ ಇಲಾಖೆಯ ಪ್ರಗತಿಯ ಮಾಹಿತಿ ನೀಡಿದರು. ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಸದಸ್ಯರು ಹಾಜರಿದ್ದರು.