ಚನ್ನಬಸಪ್ಪ ಸುಂಕದ್ 
ಜಿಲ್ಲೆ

ಪಂಚಮಸಾಲಿ ಪೂರ್ವಭಾವಿ ಸಭೆ ನಾಳೆ

Kopala - Desk - Eraveni

ಕಾರಟಗಿ: ಪಟ್ಟಣದ ಎಲ್‌ವಿಟಿ ಕಲ್ಯಾಣ ಮಂಟಪದಲ್ಲಿ ಸೆ.29ರಂದು ಬೆಳಗ್ಗೆ 10ಗಂಟೆಗೆ ಬಸವಜಯ ಮೃತ್ಯುಂಜಯಸ್ವಾಮೀಜಿಗಳ ನೇತೃತ್ವದಲ್ಲಿ 2ಎ ಮೀಸಲಾತಿಗಾಗಿ ಪಂಜಮಸಾಲಿ ಸಮಾಜ ಬಾಂಧವರ ಪೂರ್ವಭಾವಿ ಸಭೆಯನ್ನು ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ರಾಜ್ಯ ದಾಸೋಹ ಸಮಿತಿ ಅಧ್ಯಕ್ಷ ಚನ್ನಬಸಪ್ಪ ಸುಂಕದ್ ತಿಳಿಸಿದ್ದಾರೆ.

ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬಹುದಿನಗಳಿಂದ ಪಂಚಮಸಾಲಿ ಪೀಠದ ಜಗದ್ಗುರುಗಳಾದ ಬಸವಜಯಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ.

ಆದರೂ ಸರ್ಕಾರಗಳು ಶ್ರೀಗಳು ಹಾಗೂ ಸಮಾಜದ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಈಗ ಮತ್ತೊಮ್ಮೆ ಶ್ರೀಗಳ ನೇತೃತ್ವದಲ್ಲಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ, ರಸ್ತಾ ರೋಖಾ ನಡೆಸಲಾಗುತ್ತಿದೆ.

ಇದರ ಭಾಗವಾಗಿ ಜಿಲ್ಲೆಯಲ್ಲೂ ಹೋರಾಟ ನಡೆಯಲಿದ್ದು ಶ್ರೀಗಳ ನೇತೃತ್ವದಲ್ಲಿ ಸೆ.29ರಂದು ಬೆಳಗ್ಗೆ 10ಗಂಟೆಗೆ ಪಟ್ಟಣದ ಎಲ್‌ವಿಟಿ ಕಲ್ಯಾಣ ಮಂಟಪದಲ್ಲಿ ಸಮಾಜಬಾಂಧವರ ಪೂರ್ವಭಾವಿ ಸಭೆ ಕರೆಯಲಾಗಿದೆ.

ಹಾಗಾಗಿ ಸಮಾಜದ ವಿವಿಧ ಘಟಕಗಳ ಪದಾಧಿಕಾರಿಗಳು, ಹಿರಿಯ ಮುಖಂಡರು, ಯುವ ಮುಖಂಡರು, ಮಹಿಳೆಯರು ಪಾಲ್ಗೊಳ್ಳಬೇಕು. ಅಲ್ಲದೇ ಇದೇ ವೇಳೆ ಶ್ರೀಗಳು ಆಗಮಿಸುವುದರಿಂದ ಸಮಾಜದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲಾಗುತ್ತದೆ
ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.