ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ
ಪಾಂಡವಪುರ : ಸಹಕಾರ ಸಂಘಗಳನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೆಲಸ ಮಾಡಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.
ಪಿಕಾರ್ಡ್ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರೈತಸಂಘದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಸಹಕಾರ ಸಂಘಗಳನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಸಹಕಾರ ಸಂಘಗಳು ಉಳಿದರೆ ರೈತರಿಗೆ ನೆರವಾಗಲಿದೆ. ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಬೇಕಾದರೆ ಸಹಕಾರ ಆಂದೋಲನಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ತಿಳಿಸಿದರು.ಸಹಕಾರ ಸಂಘಗಳಿಂದ ಜನರ ಆರ್ಥಿಕ ಮಟ್ಟ ಸುಧಾರಣೆಯಾಗಲಿದೆ. ಈ ನಿಟ್ಟಿನಲ್ಲಿ ಸಂಘದ ಚುಕ್ಕಾಣಿ ಹಿಡಿಯುವವರ ಕ್ರಿಯಾಶೀಲತೆಯೂ ಮುಖ್ಯವಾಗಲಿದೆ. ಚುನಾವಣೆಯೂ ಅತ್ಯಂತ ಪ್ರಮುಖವಾಗಲಿದೆ.
ಭಿನ್ನಾಭಿಪ್ರಾಯಗಳನ್ನು ದೂರವಿಡಿ: ನಮ್ಮ ಕಾರ್ಯಕರ್ತರು ಭಿನ್ನಾಭಿಪ್ರಾಯಗಳನ್ನು ಬಿಟ್ಟು ಒಗ್ಗೂಡಿ ಕಾಂಗ್ರೆಸ್ ಮತ್ತು ರೈತಸಂಘ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು. ಫೆ.8 ರಂದು ನಡೆಯಲಿರುವ ಪಿಕಾರ್ಡ್ ಬ್ಯಾಂಕ್ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕು. ಸಹಕಾರ ಚಳವಳಿಗೆ ಮೌಲ್ಯ ತುಂಬಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.
ರೈತಸಂಘ ತಾಲೂಕು ಕಾರ್ಯದರ್ಶಿ ಎಣ್ಣೆಹೊಳೆಕೊಪ್ಪಲು ಮಂಜು, ಮುಖಂಡರಾದ ಎಸ್.ದಯಾನಂದ್, ಸಿ.ಎನ್.ವಿಜೇಂದ್ರ, ಆಶಾ ಲವಕುಮಾರ್, ದಯಾನಂದ ಬಾಬು, ದೊಡ್ಡಿಘಟ್ಟ ಸುರೇಶ್, ದೇವರಾಜು ಇತರರು ಇದ್ದರು.