ಜಿಲ್ಲೆ

ಸೋಂಕಿನ ನಿಯಂತ್ರಣ ಅವಶ್ಯ

Chitradurga

ಪರಶುರಾಮಪುರ: ಕರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹೊರತು ಶಾಲೆ ಆರಂಭಿಸಬಾರದು ಎಂದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಹೇಳಿದರು.

ಸಮೀಪದ ಕ್ಯಾದಿಗುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪಾಲಕರ ಸಭೆಯಲ್ಲಿ ಮಾತನಾಡಿದರು.

ಲಾಕ್‌ಡೌನ್ ಜಾರಿ ಮಾಡಿದ್ದ ಸರ್ಕಾರ ಮಾರ್ಚ್‌ನಲ್ಲಿ ನಡೆಯಬೇಕಿದ್ದ ಕೆಲ ಪರೀಕ್ಷೆಗಳನ್ನು ಮುಂದೂಡಿತ್ತು. ಆದರೆ, ಈಗ ಶಾಲೆ ಆರಂಭಿಸುವ ಕುರಿತು ಪಾಲಕರ ಅಭಿಪ್ರಾಯ ಸಂಗ್ರಹಿಸುತ್ತಿದೆ ಎಂದರು.

ಮುಖ್ಯಶಿಕ್ಷಕ ಪಿ.ಎಸ್.ಸುದರ್ಶನಬಾಬು ಮಾತನಾಡಿ, ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯ ಸರ್ಕಾರ ಜನರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ ಎಂದರು. ಶಿಕ್ಷಕರಾದ ಕೆ.ಚಂದ್ರಮ್ಮ, ಪುಷ್ಪಾವತಿ, ನಾಗರತ್ನಾ, ಮಂಜುಳಾ, ಸಮಿತಿಯ ಪದಾಧಿಕಾರಿಗಳಾದ ಲಕ್ಷ್ಮೀದೇವಿ, ಶಶಿಧರ, ರಮೇಶ ಇದ್ದರು.