ಕುಂದಾಪುರ: ವಡೇರಹೋಬಳಿಯ ಸರೋಜಿನಿ ಮದುಸೂಧನ ಕುಶೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಲಕರ ಸಭೆ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ಸಂಸತ್ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಶನಿವಾರ ಜರುಗಿತು. ಉಡುಪಿ ಡಯಟ್ ಉಪನ್ಯಾಸಕ ಪ್ರಭಾಕರ ಮಿತ್ಯಾಂತ ಕಾರ್ಯಕ್ರಮ ಉದ್ಘಾಟಿಸಿದರು. 2024-25ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಸ್‌ಡಿಎಂಸಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಬಳಿಕ ವಿದ್ಯಾರ್ಥಿ ಸಂಸತ್ ಸದಸ್ಯರಿಗೆ ಪ್ರಮಾಣವಚನ ಬೋಧಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಾನಂದ ಶ್ಯಾನುಭಾಗ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ಬಾಲಚಂದ್ರ ಹೆಬ್ಬಾರ್ ಸ್ವಾಗತಿಸಿದರು. ವಿಠಲ ವಂದಿಸಿದರು. ನಾರಾಯಣ ರಾಜು ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.