ಕೇಂದ್ರ ಸರ್ಕಾರದ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಟೂಲ್ ಕಿಟ್‌ನ ಒಂದು ಭಾಗ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಭಾಸ್ಕರ್ ರಾವ್ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿಭಟನೆ ನಡೆಸುತ್ತಿರುವವರು ಐಷಾರಾಮಿ ಕಾರುಗಳಲ್ಲಿ ಬಂದಿದ್ದಾರೆ. ಅವರ‌್ಯಾರು ನಿಜವಾದ ರೈತರಲ್ಲ. ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಖಲಿಸ್ತಾನಿಗಳು. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಂಬಂಧಪಟ್ಟ ಇಲಾಖೆಗಳ ಸಚಿವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಆದರೂ ಈ ಬೆಳವಣಿಗೆಯಿಂದ ಕೇಂದ್ರ ಸರ್ಕಾರಕ್ಕೆ ಮುಜುಗರವಾಗಿದೆ. ಆದರೆ ಪ್ರತಿಭಟನೆಯಿಂದ ಮುಂಬರುವ ಲೋಕಸಭಾ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಲಿದೆ. ನರೇಂದ್ರ ಮೋದಿ ಅವರು ಮೂರನೇ ಬಾರಿ ದೇಶದ ಪ್ರಧಾನಿ ಆಗಲಿದ್ದಾರೆ ಎಂದರು.