ವಿಜಯಪುರ: ಮುಂದಿನ ಪೀಳಿಗೆಗೆ ದೈಹಿಕ ಆರೋಗ್ಯದ ಕುರಿತು ಅರಿವು ಮೂಡಿಸುವ ಮಹತ್ತರ ಜವಾಬ್ದಾರಿ ಶಿಕರ ಮೇಲಿದೆ ಎಂದು ಬಿಎಲ್ಡಿಇ ಸಂಸ್ಥೆಯ ಆಡಳಿತಾಧಿಕಾರಿ ಡಾ. ವಿ.ಎಸ್. ಬಗಲಿ ಹೇಳಿದರು.
ನಗರದ ಬಿಎಲ್ಡಿಇ ಸಂಸ್ಥೆಯ ಜೆಎಸ್ಎಸ್ ಶಿಣ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡ ನಗರ ವಲಯ ಬಿಎಡ್ ಕಾಲೇಜುಗಳ ಅಂತರ ಕಾಲೇಜು ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಬಿಎಡ್ ವಿದ್ಯಾರ್ಥಿಗಳು ಶಿಕ ವೃತ್ತಿಯ ಕಡೆಗೆ ಗಮನ ಹರಿಸುವುದರ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೈಹಿಕವಾಗಿ ಸದೃಢರಾಗಲು ಇಂತಹ ಪಂದ್ಯಾವಳಿಗಳಲ್ಲಿ ಭಾಗವಹಿಸಬೇಕು ಎಂದರು.
ಸಂಸ್ಥೆಯ ದೈಹಿಕ ಶಿಣ ಆಡಳಿತಾಧಿಕಾರಿ ಡಾ. ಎಸ್.ಎಸ್. ಕೋರಿ ಮಾತನಾಡಿ, ಇಂದಿನ ಯಾಂತ್ರಿಕ ಯುಗದಲ್ಲಿ ಜನರು ದೈಹಿಕ ಚಟುವಟಿಕೆಗಳ ಅಭಾವವನ್ನು ಎದುರಿಸುತ್ತಿದ್ದಾರೆ. ಕ್ರೀಡೆಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯವಾಗಿದೆ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಕ್ರೀಡಾ ಮನೋಭಾವ ಮತ್ತು ಉತ್ತಮ ವ್ಯಕ್ತಿತ್ವ ಬೆಳೆಯುತ್ತದೆ ಎಂದರು.
ಮಹಾವಿದ್ಯಾಲಯದ ಪ್ರಾಚಾಯೆರ್ ಡಾ. ಬಿ.ವೈ. ಖಾಸನೀಸ, ಆಡಳಿತಾಧಿಕಾರಿ ಐ.ಎಸ್. ಕಾಳಪ್ಪನವರ, ಐಕ್ಯೂಎಸಿ ಸಂಯೋಜಕ ಡಾ. ಎಂ.ಎಸ್. ಹಿರೇಮಠ ಮತ್ತು ಸಹ ಪ್ರಾಧ್ಯಾಪಕ ಡಾ. ಎಂ.ಬಿ. ಕೋರಿ ಮಾತನಾಡಿದರು. ಡಾ. ಎಸ್.ಪಿ. ಶೇಗುಣಿಸಿ, ಎಸ್.ಎಸ್. ಪಾಟೀಲ ಮತ್ತಿತರರಿದ್ದರು.