ಗಜೇಂದ್ರಗಡ: ಯಾವುದೇ ಕ್ರೀಡಾಕೂಟಗಳಿರಲಿ ಸೋಲು-ಗೆಲುವನ್ನು ಲೆಕ್ಕಿಸದೆ ಕ್ರೀಡಾಳುಗಳು ಸ್ವಯಂಪ್ರೇರಿತರಾಗಿ ಭಾಗವಹಿಸಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಎಸ್.ಎಂ. ಭೂಮರಡ್ಡಿ ಕಾಲೇಜ್ ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ, ಪುರಸಭೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ಶರಣು ಗೋಗೇರಿ ಮಾತನಾಡಿ, ಮಕ್ಕಳ ದೈಹಿಕ, ಮಾನಸಿಕ ಆರೋಗ್ಯಕ್ಕಾಗಿ ಪ್ರತಿವರ್ಷ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ದಸರಾ ಕ್ರೀಡಾಕೂಟ ಆಯೋಜಿಸಲಾಗುತ್ತದೆ. ಇಲಾಖೆಯಿಂದ ಜಿಲ್ಲೆಯಲ್ಲಿ 121 ಹಾಲಿ ಮತ್ತು ಮಾಜಿ ಕುಸ್ತಿ ಪಟುಗಳಿಗೆ ಪ್ರತಿ ತಿಂಗಳು ಮಾಸಾಶನ ನೀಡುವ ಕೆಲಸವಾಗುತ್ತಿದೆ ಎಂದರು.
ಇದಕ್ಕೂ ಮೊದಲು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು. ಪುರಸಭೆ ವಿಪಕ್ಷ ನಾಯಕ ಮುರ್ತಜಾ ಡಾಲಾಯತ, ಸದಸ್ಯರಾದ ಶಿವರಾಜ್ ಘೊರ್ಪಡೆ, ರಾಜು ಸಾಂಗ್ಲಿಕರ, ವೆಂಕಟೇಶ ಮುದಗಲ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಹುರಳಿ, ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ, ಅಕ್ಷರ ದಾಸೋಹದ ಬಸವರಾಜ ಅಂಗಡಿ, ಮುಖಂಡರಾದ ವೀರಣ್ಣ ಶೆಟ್ಟರ್, ಅಶೋಕಕುಮಾರ ಬಾಗಮಾರ, ಎಚ್.ಎಸ್. ಸೋಂಪುರ, ವಿ.ಬಿ. ಸೋಮನಕಟ್ಟಿಮಠ, ಶ್ರೀಧರ್ ಗಂಜಿಗೌಡ್ರ, ಶ್ರೀಧರ್ ಬಿದರಳ್ಳಿ, ಎ.ಡಿ. ಕೋಲಕಾರ, ವಿ.ಆರ್. ಗುಡಿಸಾಗರ, ಉಮೇಶ ರಾಠೋಡ, ಶಾರದಾ ರಾಠೋಡ, ಮಾರುತಿ ಕಲ್ಲೋಡ್ಡರ, ಅಂದಪ್ಪ ಬಿಚ್ಚೂರ, ಇತರರಿದ್ದರು.