ಹೆಮ್ಮಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಯು.ಸತ್ಯನಾರಾಯಣ್ ರಾವ್ ಹಾಗೂ ಕಟ್‌ಬೇಲ್ತೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜ್ ಪುತ್ರನ್ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. 
ಜಿಲ್ಲೆ

ಬೂತ್‌ಮಟ್ಟದಿಂದ ಪಕ್ಷ ಕಟ್ಟುವ ಕಾರ್ಯ

ವಿಜಯವಾಣಿ ಸುದ್ದಿಜಾಲ ಕುಂದಾಪುರ

ಮುಂದಿನ ದಿನಗಳಲ್ಲಿ ಪ್ರತೀ ಬೂತ್ ಮಟ್ಟದಿಂದಲೂ ನೈಜ ಕಾರ್ಯರ್ತರನ್ನು ಗುರುತಿಸಿ ಅವರಿಗೆ ನಾಯಕತ್ವ ನೀಡುವುದರೊಂದಿಗೆ ಪಕ್ಷ ಕಟ್ಟುವ ಕೆಲಸ ನಿರಂತರ ನಡೆಯಲಿದೆ ಎಂದು ಬೈಂದೂರಿನ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.

ಕಟ್‌ಬೇಲ್ತೂರಿನ ಅವರ ನಿವಾಸದಲ್ಲಿ ಭಾನುವಾರ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದವರನ್ನು ಬರಮಾಡಿಕೊಂಡ ಬಳಿಕ ಅವರು ಮಾತನಾಡಿ, ಇಂದು ಪಕ್ಷಕ್ಕೆ ಸೇರ್ಪಡೆಯಾದ ಹಿಂದುಳಿದ ವರ್ಗಗಳ ನಾಯಕರು ಹಾಗೂ ಅವರ ಬೆಂಬಲಿಗರ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದರು.

ಹೆಮ್ಮಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಯು.ಸತ್ಯನಾರಾಯಣ್ ರಾವ್ ಹಾಗೂ ಕಟ್‌ಬೇಲ್ತೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜ್ ಪುತ್ರನ್ ಅವರು ತಮ್ಮ ಬೆಂಬಲಿಗರೊಂದಿಗೆ ಗೋಪಾಲ ಪೂಜಾರಿ ಅವರಿಂದ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಹೆಮ್ಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ, ಸದಸ್ಯರಾದ ಸುಧಾಕರ್ ಎನ್ ದೇವಾಡಿಗ, ಜಲಜ ಮೊಗವೀರ, ಶಕಿಲಾ, ಗೋಳಿಹೊಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತ ಹೆಗ್ಡೆ ಇದ್ದರು. ಪ್ರದೀಪ್‌ಕುಮಾರ್ ಶೆಟ್ಟಿ ಗುಡಿಬೆಟ್ಟು ಸ್ವಾಗತಿಸಿದರು. ಪ್ರಸನ್ನ ಕುಮಾರ್ ಶೆಟ್ಟಿ ಕೆರಾಡಿ ನಿರೂಪಿಸಿದರು.