ಕುಂದಾಪುರ: ಕುಂದಾಪುರ ಯೋಜನಾ ಪ್ರಾಧಿಕಾರ ವ್ಯಾಪ್ತಿಯಲ್ಲಿ ಸಮಸ್ಯೆ ಬಹಳಷ್ಟಿದ್ದು, ಯೋಜನಾ ಪ್ರಾಧಿಕಾರದವರು ಜನರಿಗೆ ಸಹಕಾರಿಯಾಗುವ ಕೆಲಸ ಮಾಡಬೇಕು. ಜನರ ಅನಗತ್ಯ ಅಲೆದಾಟ ತಪ್ಪಿಸಿ ಸಕಾಲದಲ್ಲಿ ಜನರ ಕೆಲಸ ಆಗುವಂತೆ ನೋಡಿಕೊಳ್ಳಬೇಕು. ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಮತ್ತು ಪ್ರಾಧಿಕಾರದ ಕೆಲಸ ಜತೆಯಲ್ಲಿ ಪಕ್ಷವನ್ನು ಬಲವಾಗಿ ಕಟ್ಟುವ ಕಾರ್ಯ ನಡೆಯಬೇಕು ಎಂದು ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ದಿನೇಶ ಹೆಗ್ಡೆ ಮೊಳಹಳ್ಳಿ ಹೇಳಿದರು.
ಕುಂದಾಪುರ ಪುರಸಭೆ ಕಟ್ಟಡದಲ್ಲಿರುವ ಕುಂದಾಪುರ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಕುಂದಾಪುರ ಯೋಜನಾ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ವಿನೋದ ಕ್ರಾಸ್ಟೋ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬುಧವಾರ ಮಾತನಾಡಿದರು.
ಕುಂದಾಪುರದ ವಕೀಲ ಎ.ಬಿ.ಶೆಟ್ಟಿ ಕುಂದಾಪುರ ಯೋಜನಾ ಪ್ರಾಧಿಕಾರ ಕಚೇರಿ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕುಂದಾಪುರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ ಶೆಟ್ಟಿ ಶುಭಹಾರೈಸಿದರು. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಮುಖಂಡರಾದ ಪ್ರಕಾಶ್ಚಂದ್ರ ಶೆಟ್ಟಿ, ಶಂಕರ ಪೂಜಾರಿ, ಕೆದೂರು ಸದಾನಂದ ಶೆಟ್ಟಿ, ಹಿರಿಯಣ್ಣ ಮೊದಲಾದವರು ಉಪಸ್ಥಿತರಿದ್ದರು. ಚಂದ್ರಶೇಖರ ಶೆಟ್ಟಿ ಸ್ವಾಗತಿಸಿದರು. ವಿಜಯ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.