ಜಿಲ್ಲೆ

ಬೆಂಗಳೂರು ನಮ್ಮ ಮೆಟ್ರೋದಲ್ಲಿ ರೊಮ್ಯಾನ್ಸ್​​​​: ಪ್ರೇಮಿಗಳ ವಿರುದ್ಧ ಪ್ರಯಾಣಿಕನ ಆಕ್ರೋಶ

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ ರೈಲಿನಲ್ಲಿ ಅಸಭ್ಯ ವರ್ತಿಸಿದ ಯುವಕ-ಯುವತಿಯ ವಿರುದ್ಧ ಪ್ರಯಾಣಿಕರೋರ್ವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ಆಕ್ರೋಶ ಹೊರ ಹಾಕಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ಸಂಚಾರ ನಿಗಮಗೆ ದೂರು ನೀಡಿದ್ದಾರೆ. ನಮ್ಮ ಮೆಟ್ರೋದ ಬಾಗಿಲು ಬಳಿ ಯುವಕ-ಯುವತಿ ನಿಂತು ತಬ್ಬಿಕೊಂಡಿದ್ದು, ಯುವತಿ ಯುವಕನಿಗೆ ಮುತ್ತು ನೀಡುತ್ತಿರುವ ದೃಶ್ಯವನ್ನು ಪ್ರಯಾಣಿಕ ವಿಡಿಯೋ ಮಾಡಿದ್ದಾರೆ.

ಈ ವಿಡಿಯೋವನ್ನು KPSB 52 ಎಂಬ ಎಕ್ಸ್​ (ಟ್ವಿಟರ್​) ಖಾತೆ ಮೂಲಕ ಪೋಸ್ಟ್​​​ ಮಾಡಲಾಗಿದ್ದು “ನಮ್ಮ ಮೆಟ್ರೋದಲ್ಲಿ ಇದೇನು ಅಸಭ್ಯವರ್ತನೆ” ಎಂದು ಪ್ರಶ್ನಿಸಿದ್ದಾರೆ. ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದಾರೆ.