ಮಂಗಳೂರು : ಶ್ರೀ ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ರಥಸಪ್ತಮಿ ಅಂಗವಾಗಿ ಪಾಂಡೇಶ್ವರದ ದ.ಕ.ಜಿಪಂ ಪ್ರೌಢ ಶಾಲೆಯಲ್ಲಿ ಮಕ್ಕಳಿಗೆ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು.
ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಲತೀಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಎಸ್‌ಡಿಎಂಸಿ ಅಧ್ಯಕ್ಷೆ ಬೃಂದಾ, ಗಾಯತ್ರಿ ಉದ್ಯಮಿ ಮುನೀರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಪ್ರತಿಷ್ಠಾನದ ಜತೆ ಕಾರ್ಯದರ್ಶಿ ಪ್ರಭಾ, ಸಂಘಟನಾ ಕಾರ್ಯದರ್ಶಿ ಅರುಣ್‌ಕುಮಾರ್, ಶಿಕ್ಷಕ ಅಶೋಕ ಪೂಜಾರಿ, ಯೋಗ ಶಿಕ್ಷಕರಾದ ಪ್ರೇಮನಾಥ ಸುವರ್ಣ, ವಸಂತ ಶೆಟ್ಟಿ , ಹರಿಣಿ , ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಲಿನಿ, ಸಾವಿತ್ರಿ ವಂದಿಸಿದರು.
ಶಿಕ್ಷಕಿ ತೇಜಶ್ರೀ ಕಾರ್ಯಕ್ರಮ ನಿರೂಪಿಸಿದರು.