ಜಿಲ್ಲೆ

ರೈಲು ನಿಲ್ದಾಣಗಳಲ್ಲಿ ಪಟೇಲರ ಸಾಧನೆ ಪ್ರದರ್ಶನ

reportermys

ಮೈಸೂರು : ಏಕತಾ ಸಪ್ತಾಹ ದಿನದ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಮತ್ತು ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನದ ಬಗ್ಗೆ ತಿಳಿಸಿಕೊಡುವ ಕೆಲಸ ಮಾಡಿದೆ.

ಮೈಸೂರು, ಚಾಮರಾಜನಗರ, ಹಾಸನ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ರೈಲು ನಿಲ್ದಾಣಗಳ ಆವರಣದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ಮಾಹಿತಿಗಳನ್ನು ಪ್ರದರ್ಶನ ಮಾಡಲಾಗಿದೆ. ಶುಕ್ರವಾರ ಆರಂಭಗೊಂಡಿರುವ ಪ್ರದರ್ಶನವು ಅ.31 ರವರೆಗೆ ನಡೆಯಲಿದೆ ಎಂದು ರೈಲ್ವೆ ಇಲಾಖೆಯ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ್ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.