ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ಆರಂಭೋತ್ಸವ ಕಾರ್ಯಕ್ರಮ ನಡೆದಿದ್ದು, ಮಕ್ಕಳನ್ನು ವಿಶೇಷವಾಗಿ ಸ್ವಾಗತಿಸಲಾಯಿತು.
ಶಿಕ್ಷಕರು ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಬರಮಾಡಿಕೊಂಡರು. ಸೌತಡ್ಕದ ನೈಮಿಷ ಗ್ರೂಪ್ ಆಫ್ ಸ್ಪೈಸಸ್‌ನ ಮಾಲಕ ಬಾಲಕೃಷ್ಣ ನೈಮಿಶ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಿದರು. ಸರಸ್ವತಿ ವಂದನೆಯ ಮೂಲಕ 2024-25ರ ಶೈಕ್ಷಣಿಕ ವರ್ಷವನ್ನು ಸ್ವಾಗತಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಗೆ ಪಾಠ ಪುಸ್ತಕ, ಬರೆಯುವ ಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ, ಸದಸ್ಯರಾದ ದೇವಪಾಲ ಅಜ್ರಿ, ರಾಜೇಶ್ ರೈ ಪರಾರ್ತಿಮಾರು, ಪ್ರೇಮಾವತಿ ಕಲ್ಲಾಜೆ, ಕಿರಣ್ ಕೆ., ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.