ಜಿಲ್ಲೆ

ಕಟ್ಟಡ ಕಾರ್ಮಿಕರಿಗೆ ೨೬ ಸಾವಿರ ರೂ. ಕನಿಷ್ಠ ವೇತನ ನೀಡಿ

Vijayanagara - Veerendra

ಹೊಸಪೇಟೆಯಲ್ಲಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರ ಪ್ರತಿಭಟನೆ

ಹೊಸಪೇಟೆ: ಕಟ್ಟಡ ಕಾರ್ಮಿಕರಿಗೆ ಮಾಸಿಕ ೨೬ ಸಾವಿರ ರೂ. ಕನಿಷ್ಠ ವೇತನ ಮತ್ತು ೧೦ ಸಾವಿರ ರೂ. ಪಿಂಚಣಿ ನಿಗದಿಗೊಳಿಸಬೇಕು ಎಂದು ಒತ್ತಾಯಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾ ಸಮಿತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಕಟ್ಟಡ ಮತ್ತು ಇತರೆ ನಿರ್ಮಾಣ ಸಾಮಗ್ರಿಗಳು, ಸಲಕರಣೆಗಳ ಬೆಲೆಗಳನ್ನು ನಿಯಂತ್ರಣ ಮಾಡಬೇಕು. ಕಾರ್ಮಿಕರ ಸೆಸ್ ವಂಚನೆ ಮತ್ತು ದುರ್ಬಳಕೆಯನ್ನು ತಡೆಗಟ್ಟಬೇಕು. ಕಟ್ಟಡ ನಿರ್ಮಾಣ ಕಲ್ಯಾಣ ಮಂಡಳಿಗಳಲ್ಲಿ ಸಿಐಟಿಯು ಸೇರಿ ಹಾಗೂ ಕೇಂದ್ರ ಕಾರ್ಮಿಕ ಸಂಘಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು. ಕಾರ್ಮಿಕರ ನಕಲಿ ಕಾರ್ಡುಗಳ ಹಾವಳಿ ತಡೆಗೆ ಕ್ರಮ ಜರುಗಿಸಬೇಕು. ರಾಜ್ಯದಲ್ಲಿ ಬಾಕಿ ಇರುವ ೨೦೨೧-೨೨ ನೇ ಶೈಕ್ಷಣಿಕ ಅರ್ಜಿಗಳಿಗೆ ಕೂಡಲೇ ಹಣ ವರ್ಗಾವಣೆ ಮಾಡಬೇಕು. ಕಾರ್ಡ್ ನವೀಕರಣಕ್ಕೆ ವೇತನ ಚೀಟಿ ಮತ್ತು ಹಾಜರಾತಿ ಪಟ್ಟಿ ಕಡ್ಡಾಯ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕರರು ಮನವಿ ಮಾಡಿದರು.

ಬೋಗಸ್ ಕಾರ್ಡ್ ನಿಯಂತ್ರಿಸಿ ನೈಜ ಕಾರ್ಮಿಕರಿಗೆ ಮಾತ್ರ ನೋಂದಣಿ ಮತ್ತು ನವೀಕರಣಕ್ಕೆ ಅವಕಾಶ ನೀಡಬೇಕು. ನಕಲಿ ಕಾರ್ಡುಗಳನ್ನು ವ್ಯಾಪಕವಾಗಿ ಮಾಡುತ್ತಿರುವ ಸೇವಾಸಿಂಧೂ ಕೇಂದ್ರಗಳಲ್ಲಿ ನೋಂದಣಿ ಮತ್ತು ನವೀಕರಣವನ್ನು ಸ್ಥಗಿತಗೊಳಿಸಿ, ಕಾರ್ಮಿಕ ಸಂಘಗಳಿಗೆ ಮಾತ್ರ ಮಾನ್ಯತೆ ನೀಡಬೇಕು.

ರಾಜ್ಯ ಸರ್ಕಾರದ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕಟ್ಟಡ ಕಾರ್ಮಿಕರ ಕುಟುಂಬಕ್ಕೂ ವಿಸ್ತರಿಸಬೇಕು. ಜೀವಿತಾವಧಿ ಪ್ರಮಾಣಪತ್ರವನ್ನು ಕಂದಾಯ ಇಲಾಖೆಯ ಬದಲಾಗಿ ಕಾರ್ಮಿಕ ಇಲಾಖೆಯಿಂದಲೇ ಒದಗಿಸಬೇಕು.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮಂಡಳಿಯಿAದ ಆರಂಭಿಸಲಾದ ಶಿಶು ವಿಹಾರ, ಮೊಬೈಲ್ ಕ್ಲಿನಿಕ್, ವಿವಿಧ ಕಿಟ್, ಬಸ್ ಪಾಸ್, ಜಾಹೀರಾತು ಕಾರ್ಯಕ್ರಮಗಳನ್ನು ತಕ್ಷಣ ನಿಲ್ಲಿಸಬೇಕು. ಬಹುದಿನದ ಕಾರ್ಮಿಕರ ಬೇಡಿಕೆಯಾದ ಮನೆ ನಿರ್ಮಾಣಕ್ಕೆ ೫ ಲಕ್ಷ ರೂ. ಸಹಾಯಧನ ನೀಡಬೇಕು. ನಿರ್ಮಾಣ ಕಾರ್ಮಿಕರಿಗೆ ಭವಿಷ್ಯನಿಧಿ ಯೋಜನೆ ಜಾರಿಗೆ ತರಬೇಕು. ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ, ಕಾರ್ಮಿಕರ ಕೆಲಸ ಕಾರ್ಯಗಳನ್ನು ಚುರುಕುಗೊಳಿಸಬೇಕು.

ಕಾರ್ಮಿಕರ ವಿರೋಧಿ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗ ಮತ್ತು ಸೇವಾ ಷರತ್ತುಗಳು) ಕಾಯ್ದೆ - ೧೯೯೬ ಮತ್ತು ಸೆಸ್ ಕಾಯ್ದೆ - ೧೯೯೬ ಕಾಯ್ದೆ ಹಾಗೂ ಅಂತರರಾಜ್ಯ ವಲಸೆ ಕಾರ್ಮಿಕರ ಕಾಯಿದೆ ೧೯೭೯ ಕಾಯ್ದೆಯನ್ನು ಅನ್ನು ಬಲಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಟ್ಟಡ ಕಾರ್ಮಿಕ ಸಂಘಟನೆ ರಾಜ್ಯ ಸಹ ಕಾರ್ಯದರ್ಶಿ ಎನ್.ಯಲ್ಲಾಲಿಂಗ, ತಾಲೂಕು ಅಧ್ಯಕ್ಷ ಎಂ.ಗೋಪಾಲ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಆರ್.ಭಾಸ್ಕರ ರೆಡ್ಡಿ, ಡಿಎಚ್‌ಎಸ್ ಮುಖಂಡ ಮರಡಿ ಜಂಬಯ್ಯ ನಾಯಕ, ಕಟ್ಟಡ ಕಾರ್ಮಿಕ ಮುಖಂಡರಾದ ಹೇಮಂತ ನಾಯ್ಕ, ನನ್ನು ಸಾಬ್, ಮಹಿಳಾ ಪ್ರಮುಖರಾದ ಲಕ್ಷಿö್ಮÃ, ಹುಲಿಗೆಮ್ಮ ಪಾಲ್ಗೊಂಡಿದ್ದರು.