ಶೃಂಗೇರಿ ಆಸ್ಪತ್ರೆಯಲ್ಲಿ ಮಂಗಳವಾರ ಆಯೋಜಿಸಿದ್ದ ಸೀಮಂತ ಕಾರ್ಯಕ್ರಮವನ್ನು ಶ್ರೀ ಪಾದರಾವ್ ಉದ್ಘಾಟಿಸಿದರು.  
ಜಿಲ್ಲೆ

ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಿ

ಜಿ.ಹೆಚ್. ಧನ್ಯಕುಮಾರ್

ಶೃಂಗೇರಿ: ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಕಾಲ ಕಾಲಕ್ಕೆ ಪೌಷ್ಟಿಕಾಂಶ ಆಹಾರ ಸೇವನೆ ಮಾಡಬೇಕು ಎಂದು ಶ್ರೀಮಠದ ಅಧಿಕಾರಿ ಶ್ರೀಪಾದರಾವ್ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಾಮೂಹಿಕ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭವಿಷ್ಯದ ಮಕ್ಕಳು ಆರೋಗ್ಯವಾಗಿರ ಬೇಕಾದರೆ ಗರ್ಭಿಣಿಯರು ಪೌಷ್ಠಿಕ ಆಹಾರ ಮತ್ತು ಇಲಾಖೆ ಮಾರ್ಗದರ್ಶನ ನೀಡುವ ಮುಂಜಾಗೃತ ಕ್ರಮ ಅನುಸರಿಸಬೇಕು. ಸರ್ಕಾರದ ಗರ್ಭಿಣಿಯರ ಸುರಕ್ಷೆಗಾಗಿ ಮನೆ ಮನೆಗೆ ಆಶಾ ಕಾರ್ಯಕರ್ತರನ್ನು ಕಳಿಸಿ, ಆರೋಗ್ಯದ ಕಡೆ ನಿಗಾ ವಹಿಸುತ್ತದೆ. ಆರೋಗ್ಯ ಇಲಾಖೆ ಸಾಮೂಹಿಕ ಸೀಮಂತ ಏರ್ಪಡಿಸುವ ಮೂಲಕ ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಿದೆ ಎಂದರು.
ಸಾರ್ವಜನಿಕ ಆಸ್ಪತ್ರೆ ತಾಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್ ಮಾತನಾಡಿ, ಗರ್ಭಿಣಿಯರು ಇಲಾಖೆ ಸೂಚನೆಯಂತೆ ಕಾಲ ಕಾಲಕ್ಕೆ ಸರ್ಕಾರದ ನಿಗದಿಪಡಿಸಿದ ಚುಚ್ಚು ಮದ್ದು ತೆಗೆದುಕೊಳ್ಳಬೇಕು. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಇಲಾಖೆ ಸೂಚನೆ ತಿಳಿಸುತ್ತಾರೆ. ತಾಯಿ ಕಾರ್ಡ್ ಅನ್ನು ಗರ್ಭಿಣಿ ಮಹಿಳೆಯರಿಗೆ ನೀಡಿ, ಸರ್ಕಾರದ ಸೌಲಭ್ಯವನ್ನು ತಲುಪಿಸಲಾಗುತ್ತದೆ.ಯಾವುದೇ ಸಮಸ್ಯೆ ಇದ್ದಲ್ಲಿ ಆಸ್ಪತ್ರೆಯನ್ನು ಸಂಪರ್ಕಿಸಬೇಕು. ಗರ್ಭಿಣಿಯರ ಆರೋಗ್ಯ ರಕ್ಷಣೆಗೆ ಇಲಾಖೆ ಎಲ್ಲ ಕ್ರಮವನ್ನು ಕೈಗೊಳ್ಳುತ್ತದೆ ಎಂದರು.