ಹರಪನಹಳ್ಳಿ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಕಾರ್ಮಿಕರು ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶಗೆ ಮನವಿ ಸಲ್ಲಿಸಿದರು. ಪ್ರಮುಖರಾದ ಯರಬಳ್ಳಿ ಅಶೋಕ, ಮಲ್ಲಿಕಾರ್ಜುನ್, ಹನುಮಂತ, ಮಹೇಶ್ ಪಕ್ಕೀರಮ್ಮ, ಕಮಲಮ್ಮ, ಮಂಜುನಾಥ ಇತರರಿದ್ದರು. 
ಜಿಲ್ಲೆ

ಗುತ್ತಿಗೆ ಕಾರ್ಮಿಕರ ಬಾಕಿ ವೇತನ ಪಾವತಿಸಿ

ಗಾಯತ್ರಿ ಮಾಲಿಪಾಟೀಲ್

ಹರಪನಹಳ್ಳಿ: ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರ ಬಾಕಿ ವೇತನ ನೀಡುವಂತೆ ಆಗ್ರಹಿಸಿ ಆಲ್-ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಮಿಕರು ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

ಎಐಟಿಯುಸಿ ತಾಲೂಕು ಕಾರ್ಯದರ್ಶಿ ಕೆರೆಗುಡಿಹಳ್ಳಿ ಹಾಲೇಶ್ ಮಾತನಾಡಿ, ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ 150ಕ್ಕೂ ಹೆಚ್ಚು ಕಾರ್ಮಿಕರಿಗೆ 9 ತಿಂಗಳಿಂದ ವೇತನ ನೀಡದ ಗುತ್ತಿಗೆ ಪಡೆದ ಏಜನ್ಸಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗುತ್ತಿಗೆ ಅಡಿ ಕೆಲಸ ಮಾಡುವ ಕಾರ್ಮಿಕರಿಗೆ ನಿಗದಿತ ಅವಧಿ ಒಳಗೆ ವೇತನ ಪಾವತಿಸುವುದು ಗುತ್ತಿಗೆದಾರರ ಜವಾಬ್ದಾರಿ. ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರ ಬದುಕು ಸವಾಲುಗಳಿಂದ ಕೊಡಿದೆ. ಸರಿಯಾದ ವೇತನ, ಸಾಮಾಜಿಕ ಭದ್ರತೆ ಮತ್ತು ಕೆಲಸದ ಪರಿಸ್ಥಿತಿಗಳು ಅನೇಕ ಬಾರಿ ಅವರ ನಿರೀಕ್ಷೆಗಳನ್ನು ಪೂರೈಸುವುದಿಲ್ಲ. ಖಾಯಂ ನೌಕರರಿಗೆ ಹೋಲಿಸಿದರೆ ಗುತ್ತಿಗೆ ನೌಕರಿಗೆ ಸೌಲಭ್ಯಗಳು ಕಡಿಮೆ. ಜತೆಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿಸದಿರುವುದು ಕುಟುಂಬ ನಿರ್ವಣೆಗೆ ಕಷ್ಟವಾಗಿದೆ ಎಂದರು.

ಕೂಡಲೇ ಬಾಕಿ ವೇತನವನ್ನು ಪಾವತಿಸಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ ಮತ್ತು ಪಿಎಫ್ ಸೌಲಭ್ಯ ಒದಗಿಸಿಬೇಕು ಎಂದು ಒತ್ತಾಯಿಸಿ ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶಗೆ ಮನವಿ ಸಲ್ಲಿಸಿದರು.