ಪಡುಬಿದ್ರಿ: ರಸ್ತೆ ಬದಿ ಬಸ್‌ಗೆ ಕಾಯುತ್ತಿದ್ದ ಸತ್ಯನಾರಾಯಣ ಎಂಬುವರಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ನಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯಿಂದ ಗಾಯಗೊಂಡ ಅವರನ್ನು ಸ್ಥಳೀಯರು ಉಪಚರಿಸಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.