ಜಿಲ್ಲೆ

ಸಿದ್ದರಾಮಯ್ಯ ಮಾತು ಕೇಳಿ ಜನ ನಗುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

ಮೈಸೂರು: ಸಿದ್ದರಾಮಯ್ಯ ಅವರ ಮಾತು ಕೇಳಿ ಜನ ನಗುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು-ಮೈಸೂರು ನಡುವಿನ ದಶಪಥ ಹೆದ್ದಾರಿ ನಿರ್ಮಾಣವಾಗಿರುವುದು ನಮ್ಮ ಸರ್ಕಾರದ ಅವಧಿಯಲ್ಲಿ. ನಿರ್ಮಿಸಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ. ಆದರೂ, ಸಿದ್ದರಾಮಯ್ಯ ಹೆದ್ದಾರಿ ನಿರ್ಮಾಣ ಮಾಡಿದ್ದು ನಾವು. ನಮಗೆ ಕ್ರೆಡಿಟ್ ಸಲ್ಲಬೇಕು ಎನ್ನುತ್ತಿರುವುದನ್ನು ಕೇಳಿ ಜನ ನಗುತ್ತಿದ್ದಾರೆ ಎಂದರು.

ಹಾಗೆ ನೋಡಿದರೆ, ರಸ್ತೆ ವಿಸ್ತರಣೆ ಆಗಬೇಕೆಂಬ ಪ್ರಸ್ತಾವ 20 ವರ್ಷಗಳ ಹಿಂದಿನಿಂದಲೂ ಇತ್ತು. ಪ್ರಸ್ತಾಪಕ್ಕೂ ಹಣ ಬಿಡುಗಡೆ ಮಾಡಿ ಅನುಷ್ಠಾನಕ್ಕೆ ತರುವುದಕ್ಕೂ ವ್ಯತ್ಯಾಸವಿದೆ ಎಂದರು. ಸಿದ್ದರಾಮಯ್ಯ ಹೆದ್ದಾರಿ ಪರಿಶೀಲನೆ ನಡೆಸಲು ನಮ್ಮ ತಕರಾರೇನಿಲ್ಲ. ಈಗಾಗಲೇ ಅಲ್ಲಿ ಸಾವಿರಾರು ಜನರು ಓಡಾಡುತ್ತಿದ್ದಾರೆ. ಅದರಲ್ಲಿ ಸಿದ್ದರಾಮಯ್ಯ ಕೂಡ ಒಬ್ಬರು ಎಂದರು.