ಜಿಲ್ಲೆ

ಜನ ಸಂಪರ್ಕ ಸಭೆ 13ರಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಸರ್ಕಾರದ ಆದೇಶದಂತೆ ಆ. 13ರಂದು ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್​ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ 11 ಗಂಟೆಗೆ ಸಭೆ ಆರಂಭವಾಗಲಿದ್ದು, ಜನರು ತಮ್ಮ ಮನವಿ, ಅಹವಾಲುಗಳನ್ನು ಸಲ್ಲಿಸಬಹುದು. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಈಗಾಗಲೇ ಜಿಲ್ಲಾ ಮಟ್ಟದ ಐದು ಜನ ಸಂಪರ್ಕ ಸಭೆ ನಡೆಸಿದ್ದು, 1972 ಮನವಿ, ಕುಂದುಕೊರತೆಗಳನ್ನು ಸ್ವೀಕರಿಸಲಾಗಿದೆ. ಅವುಗಳಲ್ಲಿ 1842 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ. ಉಳಿದ ಅರ್ಜಿಗಳು ಪರಿಶೀಲನಾ ಹಂತದಲ್ಲಿವೆ ಎಂದು ತಿಳಿಸಿದ್ದಾರೆ.