ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಪಂನಲ್ಲಿ ಆಯೋಜಿಸಿದ್ದ ತ್ರೈಮಾಸಿಕ 20 ಅಂಶಗಳ ಪ್ರಗತಿ ಪರಿಶೀಲನಾ ಸಭೆಯನ್ನು ಗ್ರಾಪಂ ಅಧ್ಯಕ್ಷ ಎನ್.ಕೃಷ್ಣ ಚಾಲನೆ ನೀಡಿದರು. ಗ್ರಾಪಂ ಸದಸ್ಯರಾದ ಎಸ್.ಬೊಮ್ಮಣ್ಣ, ಮಂಜುನಾಥ, ಮೀನಾಕ್ಷಮ್ಮ, ಸರಸ್ವತಿ, ಪಿಡಿಒ ಬಸಮ್ಮ ಇತರರಿದ್ದರು. 
ಜಿಲ್ಲೆ

ಜನರ ಸಮಸ್ಯೆಗಳಿಗೆ ಸ್ಥಳದಲ್ಲೆ ಸೂಕ್ತ ಪರಿಹಾರ

ಕೂಡ್ಲಿಗಿ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸಹಕಾರಿಯಾಗಲಿದೆ ಎಂದು ಗ್ರಾಪಂ ಅಧ್ಯಕ್ಷ ಎನ್. ಕೃಷ್ಣ ಹೇಳಿದರು.

ತಾಲೂಕಿನ ಗುಡೇಕೋಟೆ ಗ್ರಾಪಂ ಹಾಗೂ ಜಿಪಂ ವತಿಯಿಂದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಂಯುಕ್ತ ಆಶ್ರಯದಲ್ಲಿ ತ್ರೈಮಾಸಿಕ 20 ಅಂಶಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಹಿಂದೆ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿ ಮಾತ್ರ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತಿತ್ತು. ಈಗ ಸರ್ಕಾರ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ತಾಲೂಕು ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಬೇಕು ಎಂದು ಆದೇಶ ನೀಡಿದ ಹಿನ್ನೆಲೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿಯಾಗಲು ಬೇಕಾದ ಕಾಮಗಾರಿಗಳನ್ನು ಅಧಿಕಾರಿಗಳಿಂದ ಮಾಹಿತಿ ಹಾಗೂ ಜನರ ಸಮಸ್ಯೆಗಳಿಗೆ ಸ್ಥಳದಲ್ಲೆ ಸೂಕ್ತ ಪರಿಹಾರ ದೊರಕಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಗ್ರಾಪಂ ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಗುಡೇಕೋಟೆ, ಸಿಡೇಗಲ್ಲು, ಕಸಾಪುರ, ಶ್ರೀಕಂಠಾಪುರ, ಶ್ರೀಕಂಠಾಪುರ ತಾಂಡ, ಯರ್ರೋಬಯ್ಯನಹಟ್ಟಿ, ಲಿಂಗನಹಳ್ಳಿ ತಾಂಡ, ಸೇರಿ 7 ಗ್ರಾಮಗಳಲ್ಲಿ ಪ್ರತಿ ತಿಂಗಳಿಗೊಮ್ಮೆ ಒಂದೊಂದು ಗ್ರಾಮಗಳಲ್ಲಿ ತ್ರೈಮಾಸಿಕ ಸಭೆ ಆಯೋಜನೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಸರ್ಕಾರದಿಂದ ದೊರಕುವ ಸೌಲಭ್ಯ ಕುರಿತು ಮಾಹಿತಿ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಗ್ರಾಪಂ ಉಪಾಧ್ಯಕ್ಷೆ ರತ್ನಮ್ಮ, ಸದಸ್ಯರಾದ ಸರಸ್ವತಿ, ಅನಿತಮ್ಮ,ಚನ್ನಮ್ಮ, ಮಂಜುನಾಥ, ಬೊಮ್ಮಣ್ಣ, ಪಿಡಿಒ ಬಸಮ್ಮ, ಕಾರ್ಯದರ್ಶಿ ರಾಮಚಂದ್ರಪ್ಪ ಇತರರಿದ್ದರು.