ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಪೊಲೀಸ್ ಇಲಾಖೆ ವತಿಲಯಿಂದ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿದರು. ಅಪರ ಪೊಲೀಸ್ ಅಧೀಕ್ಷಕ ಗಂಗಾಧರಸ್ವಾಮಿ, ಡಿವೈಎಸ್‌ಪಿ ಕೃಷ್ಣಪ್ಪ ಇದ್ದರು. 
ಜಿಲ್ಲೆ

ಅಪರಾಧ ತಡೆಗೆ ಜನರ ಸಹಕಾರ ಅತ್ಯಗತ್ಯ

ಮಾದೇಶ್ ತಿ.ನರಸೀಪುರ

ಮಳವಳ್ಳಿ: ಅಪರಾಧ ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕಲು ಪೊಲೀಸರಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದಲೂ ಜನಸಂಪರ್ಕ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಳವಳ್ಳಿ ಪೊಲೀಸ್ ಉಪ ವಿಭಾಗದ ವತಿಯಿಂದ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಂಡ್ಯ ಜಿಲ್ಲೆಗೆ ಎಸ್ಪಿಯಾಗಿ ನಾನು ಅಧಿಕಾರ ವಹಿಸಿಕೊಂಡ ನಂತರ ಇಲ್ಲಿನ ವಾತಾವರಣ ತಿಳಿದುಕೊಳ್ಳಲು ಎಲ್ಲಾ ತಾಲೂಕು ಕೇಂದ್ರಗಳ ಠಾಣೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದೇನೆ. ಈಗಾಗಲೇ ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಂದ ಜನ ಸಂಪರ್ಕ ಸಭೆಗಳು ತಾಲೂಕು ಮಟ್ಟದಲ್ಲಿ ನಡೆಯುತ್ತಿದ್ದು, ನಮ್ಮ ಇಲಾಖೆಯಲ್ಲೂ ಹೊಸದೊಂದು ಬದಲಾವಣೆ ಮಾಡಬೇಕೆಂಬ ಚಿಂತನೆ ನಡೆಸಿ ಈ ಸಭೆಯನ್ನು ಇಲ್ಲಿಂದಲೇ ಆರಂಭಿಸಲಾಗಿದೆ ಇದಕ್ಕೆ ತಮ್ಮೆಲ್ಲರ ಸಲಹೆ, ಸಹಕಾರ ನೀಡುವಂತೆ ಮನವಿ ಮಾಡಿದ ಅವರು, ಸಭೆಯಲ್ಲಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿ ಪಟ್ಟಿ ಮಾಡಿಕೊಂಡಿರುವುದನ್ನು ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದರ ಜತೆಗೆ ಮುಂದಿನ ಸಭೆಯಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಅಪಘಾತ ಪ್ರಕರಣ ಹೆಚ್ಚಾಗಲು ಚಾಲಕರು ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಅತಿ ವೇಗ ಹಾಗೂ ಅಜಾಗರೂಕ ಚಾಲನೆ ಪ್ರಮುಖ ಕಾರಣವಾಗಿದೆ. ಅಪಘಾತ ನಿಯಂತ್ರಣಕ್ಕಾಗಿ ನಮ್ಮ ಇಲಾಖೆಯಿಂದ ಸ್ಪೀಡ್ ರೆಡಾರ್‌ಗಳು ಪೂರೈಕೆಯಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಇವುಗಳನ್ನು ಅಳವಡಿಸಿ ಸಾರಿಗೆ ನಿಯಮ ಉಲ್ಲಂಗಿಸುವವರ ವಿರುದ್ಧ ಕಪ್ರಕರಣಗಳನ್ನು ದಾಖಲಿಸಲಾಗುವುದು. ವೇಗವಾಗಿ ವಾಹನ ಚಾಲನೆ ಮಾಡುವ ಹಾಗೂ ವ್ಹೀಲಿಂಗ್ ಮಾಡುವಂತಹವರನ್ನು ಬಂಧಿಸಿ ಅವರ ಡ್ರೈವಿಂಗ್ ಲೈಸನ್ಸ್ ರದ್ದು ಮಾಡುವುದರ ಜತೆಗೆ ವಾಹನಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಟ್ಟಣದಲ್ಲಿ ಹೆಚ್ಚಿನ ಸಿಸಿ ಟಿವಿ ಅಳವಡಿಕೆಗೆ ಪುರಸಭೆ ಅಧಿಕಾರಿಗಳ ಜತೆಗೆ ಜರ್ಚೆ ನಡೆಸುತ್ತೇವೆ. ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕ್ರಮ ವಹಿಸಲಾಗುವುದು ಎಂದರು.

ಶಾಂತಿ ಕಾಲೇಜು ಬಳಿಯ ಖಾಲಿ ನಿವೇಶನದಲ್ಲಿ ರಾತ್ರಿ ವೇಳೆ ಮದ್ಯಪಾನ ಮಾಡುವರನ್ನು ನಿಯಂತ್ರಿಸಲು ಪೊಲೀಸ್ ಗಸ್ತು ಹೆಚ್ಚಿಸಲಾಗುವುದು. ಇನ್ನೂ ಹಲವು ದೂರುಗಳು ಹಾಗೂ ಸಲಹೆಗಳನ್ನು ನೀಡಿರುವುದರಿಂದ ಎಲ್ಲವನ್ನು ನಮ್ಮ ಅಧಿಕಾರಿಗಳ ಜತೆಗೆ ಚರ್ಚಿಸಿ ಸೂಕ್ತ ಕ್ರಮಕ್ಕೆ ಮುಂದಾಗುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕ ಗಂಗಾಧರಸ್ವಾಮಿ, ಡಿವೈಎಸ್‌ಪಿ ಕೃಷ್ಣಪ್ಪ ಮತ್ತಿತರರಿದ್ದರು.

ಕಿರುಗಾವಲು ಗ್ರಾಮದ ಸಂತೆಮಾಳದಲ್ಲಿ ವೇ ಬ್ರಿಡ್ಜ್‌ಗಳ ಹೆಚ್ಚಳದಿಂದಾಗಿ ಆಪಘಾತ ಹೆಚ್ಚಳ, ತಾಲೂಕಿನ ವ್ಯಾಪ್ತಿಯಲ್ಲಿ ಗಂಧದ ಮರಗಳ ಕಳ್ಳತನವಾಗುತ್ತಿದ್ದು, ಪೊಲೀಸ್ ಠಾಣೆಗಳಲ್ಲಿ ದೂರು ಸ್ವೀಕರಿಸುತ್ತಿಲ್ಲ ಎಂಬ ಆರೋಪ ಸೇರಿದಂತೆ ವಿವಿಧ ಸಮಸ್ಯೆಗಳು ಕುರಿತು ನಾಗರಿಕರು ಜನಸಂಪರ್ಕ ಸಭೆಯಲ್ಲಿ ಗಮನ ಸೆಳೆದರು.