ನವೀಕರಣಗೊಂಡ ರಾಯಚೂರಿನ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರವನ್ನು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಮಂಗಳವಾರ ಉದ್ಘಾಟಿಸಿದರು. ಶಾಸಕ ಡಾ.ಶಿವರಾಜ ಪಾಟೀಲ್, ನಗರಸಭೆ ಸದಸ್ಯರಾದ ಜಯಣ್ಣ, ಈ.ಶಶಿರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಮುಖಂಡರಾದ ಕೆ.ಶಾಂತಪ್ಪ, ಜಿ.ಶಿವಮೂರ್ತಿ, ರವೀಂದ್ರ ಜಲ್ದಾರ್, ನರಸಿಂಹಲು ಮಾಡಗಿರಿ, ಆಂಜಿನೇಯ ಕಡಗೋಲ ಇದ್ದರು. 
ಜಿಲ್ಲೆ

ಅಭಿವೃದ್ಧಿಯತ್ತ ಸಾಗಲು ಜನರ ಸಹಕಾರ ಅಗತ್ಯ

ರಾಚಯ್ಯ ಸ್ವಾಮಿ

ರಾಯಚೂರು: ಜಿಲ್ಲೆಯ ಅಭಿವೃದ್ಧಿ ಮತ್ತು ವ್ಯವಸ್ಥೆಯನ್ನು ಸರಿಪಡಿಸಲು ಜನರ ಸಹಕಾರ ಅಗತ್ಯವಾಗಿದ್ದು, ಎಲ್ಲರೂ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿದಾಗ ಮಾತ್ರ ಅಭಿವೃದ್ಧಿ ಸಾಸಲು ಸಾಧ್ಯವಾಗಲಿದೆ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಸ್ಥಳೀಯ ನವೀಕರಣಗೊಂಡ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯ ಅಭಿವೃದ್ಧಿ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದ್ದು, ಸರ್ಕಾರದಿಂದ ಬಂದ ಅನುದಾನವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
1992ರಲ್ಲಿ ಪ್ರಾರಂಭವಾದ ರಂಗಮಂದಿರವನ್ನು ಹಲವಾರು ಬಾರಿ ನವೀಕರಣ ಮಾಡಲಾಗಿದೆ. ರಂಗಮಂದಿರದಲ್ಲಿ ಸಾಕಷ್ಟು ಸಮಸ್ಯೆಗಳಿರುವುದನ್ನು ಕಂಡು ಕೆಕೆಆರ್‌ಡಿಬಿಯ 3 ಕೋಟಿ ರೂ. ಅನುದಾನದಲ್ಲಿ ನವೀಕರಣ ಮಾಡಲಾಗಿದ್ದು, ಜನರಿಗೆ, ಕಲಾವಿದರಿಗೆ ಅನುಕೂಲವಾಗಲಿದೆ.
ಮಹಿಳಾ ಸಮಾಜವನ್ನು ಅಭಿವೃದ್ಧಿ ಪಡಿಸಲಾಗಿದ್ದು, ಕರ್ನಾಟಕ ಸಂಘವನ್ನು ಸಂಪೂರ್ಣ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಜತೆಗೆ ಜಿಲ್ಲೆಯಲ್ಲಿನ ಶಾಲಾ ಕೊಠಡಿಗಳ ದುರಸ್ತಿಗೆ ಹೆಚ್ಚಿನ ಅನುದಾನವನ್ನು ನೀಡಲಾಗುತ್ತಿದೆ ಎಂದು ಎನ್.ಎಸ್.ಬೋಸರಾಜು ತಿಳಿಸಿದರು.
ನಗರ ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ರಂಗಮಂದಿರದಲ್ಲಿನ ಸಮಸ್ಯೆಗಳನ್ನು ಒಂದೊಂದಾಗಿ ಪರಿಹರಿಸುವ ಬದಲು ಏಕಕಾಲಕ್ಕೆ ಎಲ್ಲವರನ್ನು ಸರಿಪಡಿಸುವ ನಿಟ್ಟಿನಲ್ಲಿ ನಿವೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಆಸ್ತಿಗಳನ್ನು ಕಾಪಾಡುವ ಕೆಲಸವನ್ನು ಎಲ್ಲರೂ ಮಾಡಬೇಕು. ಅದು ಎಲ್ಲರ ಹೊಣೆಗಾರಿಕೆಯೂ ಕೂಡಾ.
ಮಾವಿನಕೆರೆ ಅಭಿವೃದ್ಧಿಗೆ 9.50 ಕೋಟಿ ರೂ.ಗಳನ್ನು ತೆಗೆದಿರಿಸಲಾಗಿದ್ದು, ಸಚಿವ ಎನ್.ಎಸ್.ಬೋಸರಾಜು ತಮ್ಮ ಇಲಾಖೆಯಿಂದ ಇನ್ನೂ 10 ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದ್ದಾರೆ. ಇದರಿಂದ ಕೆರೆಯನ್ನು ಅಭಿವೃದ್ಧಿ ಪಡಿಸಲಾಗುವುದು. ಪಕ್ಷಾತೀತವಾಗಿ ನಗರದ ಅಭಿವೃದ್ಧಿಗೆ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನಗರಸಭೆ ಸದಸ್ಯರಾದ ಜಯಣ್ಣ, ಈ.ಶಶಿರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಮುಖಂಡರಾದ ಕೆ.ಶಾಂತಪ್ಪ, ಜಿ.ಶಿವಮೂರ್ತಿ, ರವೀಂದ್ರ ಜಲ್ದಾರ್, ನರಸಿಂಹಲು ಮಾಡಗಿರಿ, ಆಂಜಿನೇಯ ಕಡಗೋಲ, ಶ್ರೀನಿವಾಸರೆಡ್ಡಿ, ಯು.ನರಸಿಂಹಲು, ಸನ್ನಿ ರೋನಾಲ್ಡ್ ಉಪಸ್ಥಿತರಿದ್ದರು.