ರಾಯಚೂರಿನ ತಹಸೀಲ್ ಕಾರ್ಯಾಲಯದ ಮುಂಭಾಗದಲ್ಲಿ ಸಿಐಟಿಯುನಿಂದ ಶುಕ್ರವಾರ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಕರಿಯಪ್ಪ ಅಚ್ಚೊಳ್ಳಿ ಸಹಿ ಹಾಕುವ ಮೂಲಕ ಚಾಲನೆ ನೀಡಿದರು. ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ.ಜಿ.ವೀರೇಶ, ಸಿಐಟಿಯು ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ಪ್ರಧಾನ ಕಾರ್ಯದರ್ಶಿ ಡಿ.ಎಸ್.ಶರಣಬಸವ, ಪದಾಕಾರಿಗಳಾದ ವರಲಕ್ಷ್ಮಿ, ಜಿಲಾನಿ ಪಾಷಾ, ಗೋಕರಮ್ಮ, ಇಂದಿರಮ್ಮ, ಅಕ್ಕಮಹಾದೇವಿ, ಶಕುಂತಲಾ, ರಜಿಯಾಬೇಗಂ ಇದ್ದರು. 
ಜಿಲ್ಲೆ

ಕೇಂದ್ರ ಸರ್ಕಾರದಿಂದ ಜನರ ಬದುಕು ಕಡೆಗಣನೆ

ರಾಯಚೂರು: ಬಡ ಮತ್ತು ಮಧ್ಯಮ ವರ್ಗದವರ ಬದುಕು ಕಡೆಗಣಿಸಿರುವ ಕೇಂದ್ರ ಸರ್ಕಾರ ಬಂಡವಾಳಿಗರ ಪರ ಕಾನೂನುಗಳನ್ನು ಜಾರಿಗೆ ತರುತ್ತಿದ್ದು, ಜನರ ಬದುಕು ದುರ್ಬರವಾಗಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಕರಿಯಪ್ಪ ಅಚ್ಚೊಳ್ಳಿ ಹೇಳಿದರು.
ಸ್ಥಳೀಯ ತಹಸೀಲ್ ಕಾರ್ಯಾಲಯದ ಮುಂಭಾಗದಲ್ಲಿ ಸಿಐಟಿಯುನಿಂದ ಕಾರ್ಮಿಕ ಮತ್ತು ರೈತ ವಿರೋ ಕೃಷಿ ಕಾನೂನು ವಾಪಸ್ ಪಡೆಯುವಂತೆ ಶುಕ್ರವಾರ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಗತ್ಯವಸ್ತು ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸರ್ಕಾರ ಜನವಿರೋ ನೀತಿಗಳನ್ನು ಅನುಸರಿಸುವ ಮೂಲಕ ಮಾರಕವಾದ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಅಸಂಘಟಿತ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು. ಸ್ಕೀಂ ನೌಕರರಿಗೆ ಉದ್ಯೋಗ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ.ಜಿ.ವೀರೇಶ, ಸಿಐಟಿಯು ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ಪ್ರಧಾನ ಕಾರ್ಯದರ್ಶಿ ಡಿ.ಎಸ್.ಶರಣಬಸವ, ಪದಾಕಾರಿಗಳಾದ ವರಲಕ್ಷ್ಮಿ, ಜಿಲಾನಿ ಪಾಷಾ, ಗೋಕರಮ್ಮ, ಇಂದಿರಮ್ಮ, ಅಕ್ಕಮಹಾದೇವಿ, ಶಕುಂತಲಾ, ರಜಿಯಾಬೇಗಂ ಉಪಸ್ಥಿತರಿದ್ದರು.