ಜಿಲ್ಲೆ

ಬೆಲೆ ಏರಿಕೆಯಿಂದ ಜನರ ಜೀವನ ಹೈರಾಣು

ವಿಜಯವಾಣಿ ಸುದ್ದಿಜಾಲ ಬೈಂದೂರು

ಹನ್ನೊಂದು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಸರ್ಕಾರ ಪೆಟ್ರೋಲಿಯಂ ವಸ್ತುಗಳ ಬೆಲೆ ಏರಿಕೆ ಮಾಡುವುದರ ಜತೆಗೆ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೇರಿದ್ದರಿಂದ ಎಲ್ಲ ವಸ್ತುಗಳ ಬೆಲೆ ಗಗನಕ್ಕೇರಿದೆ. ದೇಶದ ಜನಸಮಾನ್ಯರ ಜೀವನದ ಮೇಲೆ ಇದು ಪರಿಣಾಮ ಬೀರಿದ್ದು, ದರ ಏರಿಕೆಯಿಂದ ಜನರು ಹೈರಾಣಾಗಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಆರೋಪಿಸಿದರು.

ಜೆಎನ್‌ಆರ್ ಕಲಾ ಮಂದಿರದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಬೈಂದೂರು ವಿಧಾನಸಭಾ ಕ್ಷೇತ್ರದ ವತಿಯಿಂದ ನಡೆದ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಸೋಮವಾರ ನಡೆದ ಜನಾಕ್ರೋಶ ಮತ್ತು ಪ್ರತಿಭಟನಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಸಚಿವ ಮಂಕಾಳ ವೈದ್ಯ ಮಾತನಾಡಿದರು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಪ್ರತಿಭಟನಾ ರ‌್ಯಾಲಿಗೆ ಚಾಲನೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪ್ರಸಾದ್‌ರಾಜ್ ಕಾಂಚನ್, ಎಂ.ಎ.ಗಪೂರ್, ಕಿಶನ್ ಹೆಗ್ಡೆ, ರಾಜು ಪೂಜಾರಿ, ದಿನಕರ ಹೇರೂರು, ಎಂ. ಜಿ. ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕೃಷ್ಣಯ್ಯ ಶೆಟ್ಟಿ, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್‌ನ ಎಲ್ಲ ಘಟಕದ ಪದಾಕಾರಿಗಳು ಉಪಸ್ಥಿತರಿದ್ದರು. ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರದೀಪ್‌ಕುಮಾರ್ ಶೆಟ್ಟಿ ಸ್ವಾಗತಿಸಿದರು. ಎಸ್.ಪ್ರಕಾಶ್ಚಂದ್ರ ಶೆಟ್ಟಿ ವಂದಿಸಿದರು. ಪ್ರಸನ್ನಕುಮಾರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಜನರ ಕಷ್ಟಕ್ಕೆ ಸ್ಪಂದಿಸುತ್ತಿದೆ. ಇದನ್ನು ಸಹಿಸದ ಬಿಜೆಪಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ಹಿಂದುತ್ವ ವಿಚಾರದಲ್ಲಿ ಗಲಾಟೆ ಮಾಡಿಸುವುದೇ ಬಿಜೆಪಿ ಕಸುಬಾಗಿದೆ. ಮಂಕಾಳ ವೈದ್ಯ, ಸಚಿವ https://www.vijayavani.net/sneha-koota-10th-anniversary-logo-released https://www.vijayavani.net/nayari-society-cultural-celebration-kalarava