ಚಿಕ್ಕೋಡಿ ತಾಪಂ ಕಚೇರಿಯಲ್ಲಿ ನರೇಗಾ ಯೋಜನೆಯ ಪ್ರಚಾರ ವಾಹನಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಾದ್ರೋಳಿ ಚಾಲನೆ ನೀಡಿದರು. ಶಿವಾನಂದ ಶಿರಗಾಂವಿ, ರಾಜೇಂದ್ರ ಮೈಗೂರ, ರೇಖಾ ಮೇತ್ರಿ, ರಂಜಿತ ಕಾರ್ಣಿಕ ಇತರರು ಇದ್ದರು. 
ಜಿಲ್ಲೆ

ವೈಯಕ್ತಿಕ ಕಾಮಗಾರಿ ಲಾಭ ಪಡೆಯಲಿ

ರಾಘವೇಂದ್ರಗೌಡ ಭೀ ಪಾಟೀಲ್

ಚಿಕ್ಕೋಡಿ: ನರೇಗಾ ಯೋಜನೆ ಸಣ್ಣ, ಅತೀ ಸಣ್ಣ ರೈತರಿಗೆ ಬಹಳ ಅನುಕೂಲವಾಗಿದೆ. 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ಪ್ರಾರಂಭವಾಗಿದೆ. ರೈತರು ವೈಯಕ್ತಿಕ ಕಾಮಗಾರಿಗಳನ್ನು ತಮ್ಮ ಸ್ವಂತ ಜಮೀನಿನಲ್ಲಿ ಕೈಗೊಳ್ಳಲು ಅವಕಾಶವಿದ್ದು, ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಾದ್ರೋಳಿ ಹೇಳಿದರು.

ತಾಪಂ ಕಾರ್ಯಾಲಯದ ಆವರಣದಲ್ಲಿ ನರೇಗಾ ಯೋಜನೆಯಡಿ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನವನ್ನು ಉದ್ಯೋಗ ವಾಹಿನಿ ಪ್ರಚಾರ ವಾಹನಕ್ಕೆ ಈಚೆಗೆ ಚಾಲನೆ ನೀಡಿ, ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.

ಸಹಾಯಕ ನಿರ್ದೇಶಕ ಶಿವಾನಂದ ಶಿರಗಾಂವಿ(ಗ್ರಾ.ಉ) ಮಾತನಾಡಿ, ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ಪ್ರಾರಂಭವಾಗಿದ್ದು, ಎಲ್ಲ ಗ್ರಾಪಂ ವ್ಯಾಪ್ತಿಯ ರೈತರು ವೈಯಕ್ತಿಕ ಕಾಮಗಾರಿಗಳಿಗಾಗಿ ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿ ಸಲ್ಲಿಸಬಹುದು. ಬೇಡಿಕೆ ಪೆಟ್ಟಿಗೆಯಲ್ಲಿ ತಮ್ಮ ಅರ್ಜಿ ಹಾಕಬಹುದು ಎಂದರು. ಸಹಾಯಕ ಲೆಕ್ಕಾಧಿಕಾರಿ ರಾಜೇಂದ್ರ ಮೈಗೂರ, ತಾಲೂಕು ಯೋಜನಾಧಿಕಾರಿ ರೇಖಾ ಮೇತ್ರಿ, ಐಇಸಿ ಸಂಯೋಜಕ ರಂಜೀತ ಕಾರ್ಣಿಕ, ಎಂ.ಐ.ಎಸ್ ಸಂಯೋಜಕ ಚೇತನ ಶಿರಹಟ್ಟಿ, ಆಡಳಿತ ಸಹಾಯಕ ಅಕ್ಷಯ ಠಕ್ಕಪ್ಪಗೋಳ, ಸಲಿಂ ನದಾಫ್, ಬಂಡೆಪ್ಪ ಮನಮುದ್ದೆ ಇತರರು ಇದ್ದರು.