ಜಿಲ್ಲೆ

ಎಲಿಮಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

ಸೌಮ್ಯ ಆರ್

ಸುಬ್ರಹ್ಮಣ್ಯ: ಎಲಿಮಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಶ್ರೀ ಸುಬ್ರಹ್ಮಣ್ಯೇಶ್ವರ ಪಿಯು ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ ನಡೆಯಿತು.

ಜೆಸಿಐ ವಲಯ ತರಬೇತುದಾರ ಪ್ರದೀಪ್ ಬಾಕಿಲ ‘ನಾಯಕತ್ವ ಹಾಗೂ ವಾನವೀಯ ಸಂಬಂಧ’ ಎಂಬ ವಿಷಯದ ಬಗ್ಗೆ ತರಬೇತಿ ನೀಡಿದರು. ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು. ಎನ್ನೆಸ್ಸೆಸ್ ಯೋಜನಾಧಿಕಾರಿಗಳಾದ ಪೂರ್ಣಿವಾ, ಸೌಮ್ಯಾ, ಉಪನ್ಯಾಸಕರಾದ ಶ್ರುತಿ, ರಾಧಾಕೃಷ್ಣ ಚಿದ್ಗಲ್ ಹಾಗೂ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.