ಜಿಲ್ಲೆ

ಸಾಂಸ್ಕೃತಿಕ ಚಟುವಟಿಕೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಕಿವಿಮಾತು

ಮಂಡ್ಯ: ವಿದ್ಯಾರ್ಥಿಗಳು ಕಲಿಕೆ ಜತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಕಿವಿಮಾತು ಹೇಳಿದರು.

ನಗರದ ಪಿಇಎಸ್ ಕಾಲೇಜಿನ ಆವರಣದಲ್ಲಿ ಜನತಾ ಶಿಕ್ಷಣ ಟ್ರಸ್ಟ್ ಮತ್ತು ಪಿಇಎಸ್ ವಿಜ್ಞಾನ, ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಪಿಇಎಸ್ ಉತ್ಸವ-2023, ಪಾರಂಪರಿಕ ದಿನೋತ್ಸವ ಮತ್ತು ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಮ್ಮ ಕಾಲೇಜಿನಲ್ಲಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಅವಕಾಶ ಹೆಚ್ಚಿದೆ. ಆದ್ದರಿಂದ ವಿದ್ಯಾರ್ಥಿಗಳು ಗಮನಹರಿಸಿ ಸಾಧನೆ ಮಾಡಬೇಕು ಎಂದರು.

ಸಾಂಸ್ಕೃತಿಕ ಸಂಚಾಲಕ ಡಾ.ಜಿ.ವಿ.ನರಸಿಂಹನ್ ಮಾತನಾಡಿ, ಸರ್ವಜನಾಂಗದ ಶಾಂತಿಯ ತೋಟದಲ್ಲಿ ಎಲ್ಲರೂ ಸಮಾನವಾದ ರೀತಿಯಲ್ಲಿ ಬದುಕುವುದು ಮುಖ್ಯವಾಗಬೇಕು. ಎಲ್ಲರೂ ಸಹೋದರತ್ವ ಭಾವನೆಯಿಂದ ಬದುಕುವ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಆ ನಿಟ್ಟಿನಲ್ಲಿ ಸಾಗಬೇಕು ಎಂದು ಸಲಹೆ ನೀಡಿದರು.

ಪ್ರಾಂಶುಪಾಲ ಡಾ.ಜೆ.ಮಹದೇವ, ಪಿಇಟಿ ಜಂಟಿ ಕಾರ್ಯದರ್ಶಿ ದಯಾನಂದ, ಸಹ ಪ್ರಾಧ್ಯಾಪಕರಾದ ವೀರೇಶ್, ಡೇವಿಡ್ ಭಾಗವಹಿಸಿದ್ದರು. ವೇದಿಕೆ ಸಮಾರಂಭಕ್ಕೂ ಮುನ್ನ ಕೆ.ಎಸ್.ವಿಜಯಾನಂದ ಅವರನ್ನು ಅವರು ಎತ್ತಿನಗಾಡಿಯಲ್ಲಿ ಮೆರವಣಿಗೆ ಮೂಲಕ ಕರೆದುಕೊಂಡು ಬರಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಉಡುಗೆ ತೊಡುಗೆ ತೊಟ್ಟು ಎಲ್ಲರ ಗಮನ ಸೆಳೆದರು. ವೇಷಭೂಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಭ್ರಮ ಸಡಗರದಿಂದ ನಡೆದವು.