ಜಿಲ್ಲೆ

ವೈದ್ಯರ ವಿರುದ್ಧ ಕ್ರಮಕ್ಕೆ ಮನವಿ

ವೀರೇಶ ಸೌದ್ರಿ

ಹೊನ್ನಾವರ: ಚಿಕಿತ್ಸೆಗೆಂದು ದಾಖಲಾಗಿದ್ದ ಪತಿಯ ಸಾವು ಸಂಶಯಾಸ್ಪದವಾಗಿದ್ದು, ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಖಾಸಗಿ ಆಸ್ಪತ್ರೆಯೊಂದರ ವಿರುದ್ಧ ಮೃತನ ಪತ್ನಿ ಗುರುವಾರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಪಟ್ಟಣದ ಪ್ರಭಾತನಗರದ ಮೊಹಮ್ಮದ ಆಸ್ೀ ಇಬ್ರಾಹೀಂ ಸಾಬ್ (33) ಮತಪಟ್ಟ ವ್ಯಕ್ತಿ. ಈತನ ಪತ್ನಿ ಸುಮಯ್ಯ ಮಹಮ್ಮದ ಆಸ್ೀ ದೂರು ದಾಖಲಿಸಿದ್ದಾರೆ. ಆಸೀಫ್‌ಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಆ. 18ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಮೂತ್ರಪಿಂಡದಲ್ಲಿ ಕಲ್ಲುಗಳಿದ್ದು ಲೇಸರ್ ಚಿಕಿತ್ಸೆ ನೀಡುವುದಾಗಿ ಹೇಳಿದ್ದರು. ಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವೈದ್ಯರು ತಿಳಿಸಿದರು. ಅದರಂತೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲು ಮುಂದಾದಾಗ ಆಸೀಫ್ ಈಗಾಗಲೇ ಮತಪಟ್ಟಿದ್ದಾನೆ ಎಂದು ಅಲ್ಲಿನ ವೈದ್ಯರು ಖಚಿತ ಪಡಿಸಿದರು. ಹೀಗಾಗಿ ಗಂಡನ ಸಾವಿನ ಬಗ್ಗೆ ಸಂಶಯವಿದ್ದು, ತನಿಖೆ ನಡೆಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರತಿಭಟನೆ

ಇಬ್ರಾಹಿಂ ಆಸೀಫ್ ಸಾವಿನ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಶರಾವತಿ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಶುಕ್ರವಾರ ಪ್ರತಿಭಟನಾ ಮೆರವಣೆಗೆ ನಡೆಸಿದರು. ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ರವಿರಾಜ್ ದೀಕ್ಷಿತ್ ಅವರಿಗೆ ಮನವಿ ಸಲ್ಲಿಸಲಾಯಿತು. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಮಹಮ್ಮದ್ ತೌಫಿಕ್ ಬ್ಯಾರಿ, ಖರ್ವಾ ಗ್ರಾಪಂ ಸದಸ್ಯ ಇಬ್ರಾಹಿಂ ಸಾಬ್, ಹೊನ್ನಾವರ ತಂಜೀಂ ಅಧ್ಯಕ್ಷ ಮಹಮ್ಮದ್ ಅಲಿ ಇಬ್ರಾಹಿಂಸಾಬ್, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆ ವೇಳೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.