ಜಿಲ್ಲೆ

ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಖಂಡನೆ

ಬೆಳಗಾವಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬೆಳಗಾವಿ ಹಿರಿಯ ನಾಗರಿಕರು ಹಾಗೂ ವಕೀಲರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಪದೇ ಪದೆ ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಜಾಗತಿಕವಾಗಿ ಒಂದು ಬ್ಯಾರಲ್ ತೈಲದ ಬೆಲೆ 40 ಡಾಲರ್ ಇರುವುದರಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸುತ್ತಿರುವುದು ಸರಿಯಲ್ಲ. ಮೊದಲೇ ಕರೊನಾ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.

ಬೆಲೆ ಏರಿಕೆ ಜನರಿಗೆ ಹೊರೆಯಾಗಿದೆ. ತಕ್ಷಣವೇ ಪೆಟ್ರೋಲ್, ಡೀಸೆಲ್ ಬೆಲೆಯನ್ನು 10 ರೂಪಾಯಿ ಕಡಿಮೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಅಣ್ಣಾಸಾಹೇಬ ಘೋರ್ಪಡೆ, ಬಿ.ಪಿ. ಜೇವಣಿ, ಬಸಯ್ಯ ಹಿರೇಮಠ, ವೈ.ಕೆ. ದಿವಟೆ, ಶರತ್ ದೇಸಾಯಿ, ಎನ್.ಆರ್. ಲಾತೂರ್ ಇತರರಿದ್ದರು.