ಜಿಲ್ಲೆ

ನಾಳೆ ಚಂದನ ವಾಹಿನಿಯಲ್ಲಿ ಮಾಹಿತಿ ಹಕ್ಕು ಕಾಯ್ದೆ ಕುರಿತು ಫೋನ್ ಇನ್ ಕಾರ್ಯಕ್ರಮ | RTI

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಗೆ 20 ವರ್ಷ ತುಂಬಿರುವ ನಿಮಿತ್ತ, ದೂರದರ್ಶನ ಚಂದನ ವಾಹಿನಿಯಲ್ಲಿ ಮಂಗಳವಾರ (ಅ.7) ಮಧ್ಯಾಹ್ನ 12 ಗಂಟೆಗೆ ಹಲೋ ಗೆಳೆಯರೇ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನರಿಗೆ ಮಾಹಿತಿ ಹಕ್ಕು ಕುರಿತು ಅರಿವು ಮೂಡಿಸುವ ಹಿನ್ನಲೆಯಲ್ಲಿ ಆಯೋಜಿಸಿರುವ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅವರು ಪಾಲ್ಗೊಂಡು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ.

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು, 080-23542599/699