ಬೆಂಗಳೂರು: ಫೋನ್ ಟ್ಯಾಪಿಂಗ್ ಆರೋಪವಲ್ಲ, ಸತ್ಯ. ಕಳೆದ 15 ದಿನಗಳಿಂದ ಕರೆ ದೂರವಾಣಿಯಲ್ಲಿ ಮಾತನಾಡುವಾಗ ಅಡಚಣೆ ಆಗುತ್ತಿದೆ. ಈ ಸಂಬಂಧ ದೂರು ನೀಡಲಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
'ನನ್ನ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದರು. ಈ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸುರೇಶ್, ಫೋನ್ ಟ್ಯಾಪಿಂಗ್ನಲ್ಲಿ ಬಿಜೆಪಿಯವರು ಎಕ್ಸ್ಪರ್ಟ್. ಒಂದು ಪಕ್ಷದ ಅಧ್ಯಕ್ಷರು ಇದನ್ನು ಗಂಭೀರವಾಗಿ ಮಾಡಿದ್ದಾರೆ. ರಾಜ್ಯ ಸರ್ಕಾರ ಮೊದಲು ಈ ಪ್ರಕರಣವನ್ನು ಪರಿಗಣಿಸಬೇಕು. ಇಲ್ಲವಾದರೆ ನಾನೇ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಎಚ್ಚರಿಸಿದರು.
‘ನನ್ನ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದರು. ಈ ಮಾತಿಗೆ ಧ್ವನಿಗೂಡಿಸಿರುವ ಅವರ ಸಹೋದರ ಡಿ.ಕೆ. ಸುರೇಶ್, ಫೋನ್ ಟ್ಯಾಪಿಂಗ್ ಆರೋಪವಲ್ಲ, ಸತ್ಯ ಎಂದಿದ್ದಾರೆ.
ಡಿಜೆ ಹಳ್ಳಿ ಪ್ರಕರಣದಲ್ಲಿ ಗುಪ್ತಚರ ಇಲಾಖೆ ವೈಫಲ್ಯವಿದೆ. ಅದನ್ನ ಸರ್ಕಾರ ಒಪ್ಪಿಕೊಳ್ಳಬೇಕು. ಅದನ್ನು ಬಿಟ್ಟು ಮುಚ್ಚಿಹಾಕುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ನಡೆಯುತ್ತಿದೆ ಎಂದು ಸುರೇಶ್ ವಾಗ್ದಾಳಿ ನಡೆಸಿದರು.