ಜಿಲ್ಲೆ

ಅಮೃತ ಮಹೋತ್ಸವ ಸಂಭ್ರಮದಲ್ಲಿ ಪಿಕಾರ್ಡ್ ಬ್ಯಾಂಕ್

ಶೃಂಗೇರಿ: 1948ರಲ್ಲಿ ಪ್ರಾರಂಭಗೊಂಡ ಪಿಕಾರ್ಡ್ ಬ್ಯಾಂಕ್ ಕಳೆದ 75 ವರ್ಷಗಳಿಂದ ರೈತರ ಅರ್ಥಿಕ ಕೃಷಿ ಚಟುವಟಿಕೆಗಳಿಗೆ ನೆರವು ನೀಡುತ್ತಾ ಅಮೃತ ಮಹೋತ್ಸವ ಆಚರಣೆಯಲ್ಲಿದೆ ಎಂದು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎ.ಎಸ್.ನಯನ ಹೇಳಿದರು.
ಶಾರದಾ ನಗರದಲ್ಲಿ ಸುಮಾರು 70ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಟ್ಟಡವನ್ನು 16ರಂದು ಶ್ರೀಮಠದ ಮುಖ್ಯ ಸಲಹೆಗಾರರಾದ ಡಾ.ವಿ.ಆರ್.ಗೌರಿಶಂಕರ್ ಉದ್ಘಾಟಿಸಲಿದ್ದಾರೆ.
ಶಾಸಕ ಟಿ.ಡಿ.ರಾಜೇಗೌಡ ಸಭಾಂಗಣದ ಉದ್ಘಾಟನೆ, ತಿಪಟೂರು ಶಾಸಕ ಕೆ.ಷಡಕ್ಷರಿ ವಾಣಿಜ್ಯ ಮಳಿಗೆ ಉದ್ಘಾಟನೆ ನೆರವೇರಿಸಲಿದ್ದಾರೆ. ನಂತರ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮಕ್ಕೆ ಶ್ರೀಮಠದ ಆಡಳಿತಾಧಿಕಾರಿ ಪಿ.ಎ.ಮುರಳಿ ಚಾಲನೆ ನೀಡಲಿದ್ದಾರೆ.
ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎ.ಎಸ್,ನಯನ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ,ಎಂಎಲ್‌ಸಿಗಳಾದ ಎಸ್.ಎಲ್.ಭೋಜೆಗೌಡ, ಸಿ.ಟಿ.ರವಿ, ಡಾ.ಧನಂಜಯ ಸರ್ಜಿ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್, ಉಪಾಧ್ಯಕ್ಷ ಡಿ.ಸಿ.ಶಂಕರಪ್ಪ, ಪಪಂ ಅಧ್ಯಕ್ಷ ಎಚ್.ಎಸ್.ವೇಣುಗೋಪಾಲ್, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಡಾ.ಡಿ.ಎಸ್.ತೇಜಸ್ವಿನಿ.ಪಿಕಾರ್ಡ್ ಬ್ಯಾಂಕ್ ಉಪಾಧ್ಯಕ್ಷ ಚನ್ನಕೇಶವ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.