ಜಿಲ್ಲೆ

ಪೋಸ್ಟರ್ ತಯಾರಿಕೆಯಲ್ಲಿ ರಾಜ್ಯಮಟ್ಟಕ್ಕೆ ಬಿಂದು

Gadag - Desk - Tippanna Avadoot

ಶಿರಸಿ: ರಾಷ್ಟ್ರೀಯ ಮತದಾರರ ದಿನದ ಪ್ರಯುಕ್ತ ಡಿ. 13ರಂದು ಯಲ್ಲಾಪುರದಲ್ಲಿ ನಡೆದ ಮತದಾನ ಸಾಕ್ಷರತಾ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪೋಸ್ಟರ್ ತಯಾರಿಕೆಯಲ್ಲಿ ನಗರದ ಡೋನ್ ಬೋಸ್ಕೋ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಬಿಂದು ಜಗದೀಶ್ ಜೈವಂತ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಇದೇ ವಿದ್ಯಾರ್ಥಿನಿ ಡಿ. 14ರಂದು ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲೂ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿ ಸಾಧನೆಗೆ ಶಾಲೆಯ ಮುಖ್ಯಾಧ್ಯಾಪಕರು, ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.