ಪಾಂಡವಪುರ : ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಪೊಲೀಸ್, ಶಿಕ್ಷಣ ಇಲಾಖೆ, ತಾಲೂಕು ಆಡಳಿತ, ತಾಪಂ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನಾಚರಣೆ ಅಂಗವಾಗಿ ತಂಬಾಕು ಮುಕ್ತ ಜೀವನಕ್ಕಾಗಿ ಆಯೋಜಿಸಿದ್ದ ಗುಲಾಬಿ ಆಂದೋಲನಕ್ಕೆ ತಹಸೀಲ್ದಾರ್ ಎಸ್.ಸಂತೋಷ್ ಮಂಗಳವಾರ ಚಾಲನೆ ನೀಡಿದರು.
ಬಳಿಕ ಅವರು ಮಾತನಾಡಿದ ಅವರು, ದೇಶದಲ್ಲಿ ಲಕ್ಷಾಂತರ ಜನ ತಂಬಾಕು ಬಳಕೆಯಿಂದ ಕ್ಯಾನ್ಸರ್‌ಗೆ ಬಲಿಯಾಗುತ್ತಿದ್ದಾರೆ. ಯುವ ಸಮೂಹ ತಂಬಾಕು ಚಟದಿಂದ ಮುಕ್ತಾರಾಗಬೇಕು. ಯುವಕರಿಗೆ ಜಾಗೃತಿ ಮೂಡಿಸಬೇಕು. ತಂಬಾಕು ಸೇವನೆಯಿಂದ ಆಗುವ ಪರಿಣಾಮಗಳನ್ನು ಮನದಟ್ಟು ಮಾಡುವ ಮೂಲಕ ವ್ಯಸನ ಮುಕ್ತ ಭಾರತಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಇದೇ ವೇಳೆ ಉಪವಿಭಾಗೀಯ ಆಸ್ಪತ್ರೆ ಸುತ್ತಲಿನ ಪ್ರದೇಶದಲ್ಲಿನ ಚಿಲ್ಲರೆ ಅಂಗಡಿಗಳು, ಕ್ಯಾಂಟೀನ್‌ಗಳ ಮೇಲೆ ದಾಳಿ ನಡೆಸಿ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಯಿತು. ತಾಪಂ ಇಒ ಲೋಕೇಶ್‌ಮೂರ್ತಿ, ಉಪವಿಭಾಗೀಯ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸಿ.ಎ.ಅರವಿಂದ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಚಂದ್ರಶೇಖರ್, ಪುಟ್ಟಸ್ವಾಮಿ ಇತರರು ಇದ್ದರು.