ಜಿಲ್ಲೆ

ಬನ್ನಿತಾಳಪುರ ಗ್ರಾಮ ಪಂಚಾಯಿತಿಗೆ ಪಿಣ್ಣಮ್ಮ ಅಧ್ಯಕ್ಷೆ

ಗುಂಡ್ಲುಪೇಟೆ: ತಾಲೂಕಿನ ಬನ್ನಿತಾಳಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆಯಾಗಿ ಪಿಣ್ಣಮ್ಮ ಮತ್ತು ಉಪಾಧ್ಯಕ್ಷೆಯಾಗಿ ಶಿವಮ್ಮ ಅವಿರೋಧವಾಗಿ ಆಯ್ಕೆಯಾದರು.

ಕಾಂಗ್ರೆಸ್ ಒಳಒಪ್ಪಂದದಂತೆ ಈ ಹಿಂದೆ ಅಧ್ಯಕ್ಷರಾಗಿದ್ದ ಶರಣ್ ಹಾಗೂ ಉಪಾಧ್ಯಕ್ಷೆ ಮಹದೇವಮ್ಮ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಗಳಿಗೆ ಮಂಗಳವಾರ ಚುನಾವಣೆ ನಡೆಯಿತು. ಅಧ್ಯಕ್ಷೆ ಸ್ಥಾನಕ್ಕೆ ಪಿಣ್ಣಮ್ಮ ಮತ್ತು ಉಪಾಧ್ಯಕ್ಷೆ ಸ್ಥಾನಕ್ಕೆ ಶಿವಮ್ಮ ಬಿಟ್ಟು ಬೇರೆ ಯಾವ ಸದಸ್ಯರು ನಾಮಪತ್ರ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಶಿಶು ಅಭಿವೃದ್ಧಿ ಅಧಿಕಾರಿ ಹೇಮಾವತಿ ಅವಿರೋಧ ಆಯ್ಕೆ ಬಗ್ಗೆ ಘೋಷಿಸಿದರು.

ಸದಸ್ಯರಾದ ತಾಯಮ್ಮಣ್ಣಿ, ಮಹದೇವಶೆಟ್ಟಿ, ಅಭಿವೃದ್ಧಿ ಅಧಿಕಾರಿ ಎ.ಎಂ.ಮಹೇಶ್, ಬಿಲ್ ಕಲೆಕ್ಟರ್ ಮಲ್ಲು ಸೇರಿದಂತೆ ಹಲವರು ಇದ್ದರು.